ಆಂಗ್ಲ ಮಾಧ್ಯಮದಿಂದ ಕನ್ನಡ ಮಾಧ್ಯಮ ಶಾಲೆಗಳಿಗೆ ಸಂಕಷ್ಟ- ಕೆ.ಅನಂತಪದ್ಮನಾಭ ಐತಾಳ್
ಕುಂದಾಪುರ ಮಿರರ್ ಸುದ್ದಿ…
ಕೋಟ : ಸರಕಾರಿ ಅಥವಾ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸಲು ಆಂಗ್ಲ ಮಾಧ್ಯಮ ಶಾಲೆಗಳೆ ಕಾರಣ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಟ್ರಸ್ಟಿ ಕೆ. ಅನಂತಪದ್ಮನಾಭ ಐತಾಳ್ ಹೇಳಿದರು.
ಶುಕ್ರವಾರ ಕೋಟ ಸರಕಾರ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹಸ್ತ ಲಿಖಿತ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಪ್ರತಿಯೊಬ್ಬ ಪೋಷಕರು ನೆನಪಿಟ್ಟುಕೊಳ್ಳಬೇಕಾದ ವಿಷಯ ಏನೆಂದರೆ ಕನ್ನಡ ಮಾಧ್ಯಮ ಶಾಲೆಗಳ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಜೊತೆಗೆ ನೈಜ ಶಿಕ್ಷಣದ ವ್ಯವಸ್ಥೆ ಸಿಗುತ್ತಿದ್ದು ಖಾಸಗಿ ಆಂಗ್ಲ ಶಾಲೆಗಳಲ್ಲಿ ಮಕ್ಕಳಿಗೆ ಬೇಕಾದ ಸಂಸ್ಕಾರಭರಿತ ಶಿಕ್ಷಣ ಸಿಗುತ್ತಿಲ್ಲ ಬರೇ ಅಂಕದ ಮೇಲೆ ಆ ಮಕ್ಕಳ ಭವಿಷ್ಯ ಸೃಷ್ಠಿಯಾಗುತ್ತಿದೆ. ಇದು ಬೇಸರದ ಸಂಗತಿಯಾಗಿದೆ. ಅಲ್ಲದೆ ಮಕ್ಕಳನ್ನು ಮೊಬೈಲ್ ನಿಂದ ಮುಕ್ತರಾಗಿಸಲು ಪೋಷಕರಿಗೆ ಕರೆಇತ್ತರಲ್ಲದೆ ಶಾಲಾಭಿವೃದ್ಧಿಯಲ್ಲಿ ಶಾಲಾ ಎಸ್ ಡಿ ಎಂ ಸಿ ಹಾಗೂ ಮುಖ್ಯ ಶಿಕ್ಷಕರ ಪಾತ್ರ ಅಷ್ಟೆ ಗಣನೀಯವಾದದ್ದು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಇವರಿಗೆ ಅಭಿನಂದನೆ ಸಲ್ಲಿಸಲಾಯಿತು. ಶಾಲಾ ಹಳೇ ವಿದ್ಯಾರ್ಥಿ ಸುಬ್ರಹ್ಮಣ್ಯ ಹೊಳ್ಳ, ನಿವೃತ್ತ ಉಪನ್ಯಾಸಕ ಉಪೇಂದ್ರ ಸೋಮಯಾಜಿ, ಕಾಮಧೇನು ಸೊಸೈಟಿ ಪ್ರಭಂಧಕಿ ಸವಿತಾ, ,ನಿರ್ಮಿತಿ ಕೇಂದ್ರ ಉಡುಪಿ ಇದರ ಯೋಜನಾಧಿಕಾರಿ ವಿಜಯ ಕುಮಾರ್ ಶೆಟ್ಟಿ ಇವರುಗಳನ್ನು ಸನ್ಮಾನಿಸಲಾಯಿತು.
ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ವಿತರಿಸಿದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಪುಷ್ಭಾವತಿ ಹೊಳ್ಳ ವಹಿಸಿ ಸ್ವಾಗತಿಸಿದರು.
ಮುಖ್ಯ ಅಭ್ಯಾಗತರಾಗಿ ಗುತ್ತಿಗೆದಾರರಾದ ಎಂ.ಸುಬ್ರಾಯ ಆಚಾರ್, ,ಬ್ರಹ್ಮಾವರ ಹೋಬಳಿ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ,ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ, ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ವಾಸು ಪೂಜಾರಿ,ಶಾಲಾ ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್ ಪ್ರಮೋದ್ ಹಂದೆ,ಬಿ.ಆರ್.ಪಿ ಉದಯ್ ಕೋಟ,ವಿದ್ಯಾರ್ಥಿ ಮುಖಂಡರಾದ ಮನೋಜ್,ಅನಘ ಎಮ್ ಹೊಳ್ಳ, ಉಪಸ್ಥಿತರಿದ್ದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಮಹಾಲಕ್ಷ್ಮಿ ಎಂ.ಪಿ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಶಿಕ್ಷಕ ರೂಬಿ ಪಿಂಟೋ ನಿರೂಪಿಸಿದರು.ಶಿಕ್ಷಕಿ ವಿನಯ ಕುಮಾರಿ ವಂದಿಸಿದರು. ಶಿಕ್ಷಕಿ ಪುಷ್ಭಲತಾ ಸಹಕರಿಸಿದರು.











