ಕುಂದಾಪುರ ಮಿರರ್ ಸುದ್ದಿ…
ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರ ಕೋಟ ಮತ್ತು ತೋಳಾರ್ ಓಷಿಯನ್ ಪ್ರಾಡಕ್ಟ್ ಪಡುಕೆರೆ ಇವರ ಜಂಟಿ ಆಶ್ರಯದಲ್ಲಿ ಆನೆಕಾಲು ರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ರಕ್ತಲೇಪನ ಸಂಗ್ರಹಣೆ ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರವನ್ನು ಪಡುಕರೆ ತೋಳಾರ್ ಓಷಿಯನ್ ಪ್ರಾಡಕ್ಟ್ ಕಾರ್ಮಿಕರಿಗೆ ನಡೆಸಲಾಯಿತು.
ಕಾರ್ಯಕ್ರಮವನ್ನು ವಲಯ ಸಹಾಯಕ ಗವರ್ನರ್ ನರಸಿಂಹ ಪ್ರಭು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಸಾಲಿಗ್ರಾಮ ರೋಟರಿ ಕ್ಲಬ್ ಅಧ್ಯಕ್ಷ ದೇವಪ್ಪ ಪಟಗಾರ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತೋಳಾರ್ ಓಷಿಯನ್ ಪ್ರಾಡಕ್ಟ್ ಮ್ಯಾನೇಜರ್ ಯೋಗೇಶ್ ಭಾಗವಹಿಸಿ ಕಾರ್ಮಿಕರ ಕಲ್ಯಾಣಕ್ಕಾಗಿ ನಡೆಸುತ್ತಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಸಮುದಾಯ ಆರೋಗ್ಯ ಕೇಂದ್ರ ಕೋಟ ಇದರ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ, ಆರೋಗ್ಯ ನಿರೀಕ್ಷಣಾಧಿಕಾರಿ ಹರಿಶ್ಚಂದ್ರ ನಾಯಕ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಂದಾ ನಾಯಕ್, ಬೇಬಿ, ಆಶಾ ಕಾರ್ಯಕರ್ತೆಯರಾದ ಶೈಲಜಾ ಮತ್ತು ಸುಧಾ ಈ ಶಿಬಿರವನ್ನು ನಡೆಸಿಕೊಟ್ಟರು.











