ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸರ್ಕಾರಿ ಪ್ರೌಢಶಾಲೆ ಕಾಳಾವರದಲ್ಲಿ ವಾರ್ಷಿಕ ಕ್ರೀಡಾಕೂಟ ಬುಧವಾರದಂದು ನಡೆಯಿತು. ಕ್ರೀಡಾಕೂಟದ ರಮೇಶ್ ಆಚಾರ್ ಪಥ ಸಂಚಲನಕ್ಕೆ ಹಸಿರು ನಿಶಾನೆ ತೋರಿದರು. ನಂತರ ವಿದ್ಯಾರ್ಥಿಗಳಿಂದ ಶಿಸ್ತುಬದ್ಧ ಸುಂದರ ಪಥ ಸಂಚಲನ ನಡೆಯಿತು. ಕಾಳಾವರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮಂಜುನಾಥ ಶೆಟ್ಟಿಗಾರ್ ಗೌರವ ವಂದನೆ ಸ್ವೀಕರಿಸಿದರು. ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು. ಕ್ರೀಡಾ ಮಂತ್ರಿ ಸುಶಾಂತ್ ಕ್ರೀಡಾ ಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗರು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಅರುಣ್ ಕುಮಾರ್ ವಂದಿಸಿದರು ಹಾಗೂ ರವಿರಾಜ್ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು.
ಕ್ರೀಡಾ ಕೂಟದಲ್ಲಿ ತೀರ್ಮಾನಕಾರಕರಾಗಿ ಬಸ್ರೂರು ಪ್ರೌಢಶಾಲೆಯ ಸುಧಾಕರ ಶೆಟ್ಟಿ, ಸರ್ಕಾರಿ ಪ್ರಾಥಮಿಕ ಶಾಲೆ ಕಾಳಾವರದ ಬಾಲಕೃಷ್ಣ ಶೆಟ್ಟಿ, ಕುಂದಾಪುರ ಸಂತ ಪಿಯೂಸ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರತ್ನಾಕರ ಶೆಟ್ಟಿಯವರು ಭಾಗವಹಿಸಿ ಕ್ರೀಡಾ ಕೂಟ ಯಶಸ್ವಿಗೊಳಿಸಿದರು.











