ಕುಂದಾಪುರ :ಆನೆಗುಡ್ಡೆಯಲ್ಲಿ ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆ

0
791

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾಸಿ ಇವರ ನೇತೃತ್ವದಲ್ಲಿ ಕುಂದಾಪುರ ಭಜನಾ ಮಂಡಳಿಗಳ ಸಹಯೋಗದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆ, ಭಕ್ತಿಗಾನ ನೃತ್ಯ ಜೋಡಿ ಭಜನಾ ಸ್ಪರ್ಧೆ ಡಿ.3 ರವಿವಾರ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ ಎಂದು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಿತಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ತಿಳಿಸಿದರು.

ಅವರು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಬಗ್ಗೆ ಮಾಹಿತಿ ನೀಡಿದರು.

ಡಿ.3ರ ಬೆಳಿಗ್ಗೆ 8.30ಕ್ಕೆ ಭವ್ಯ ಪುರಮೆರವಣಿಗೆಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿಗಳಾದ ಶ್ರೀ ರಮಣ ಉಪಾಧ್ಯಾಯರು ಚಾಲನೆ ನೀಡಿಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯನ್ನು ಸುರತ್ಕಲ್ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಶ್ರೀಕ್ಷೇತ್ರ ಆನೆಗುಡ್ಡೆ ವಿನಾಯಕ ದೇವಸ್ಥಾನದ ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ವಹಿಸಲಿದ್ದಾರೆ ಎಂದರು.

ಬೆಳಿಗ್ಗೆ 10 ಗಂಟೆಗೆ ಭಕ್ತಿಗಾನ ನೃತ್ಯ ಜೋಡಿ ಭಜನಾ ಸ್ಪರ್ಧೆ ಆರಂಭಗೊಳ್ಳಲಿದೆ. ರಾಜ್ಯ ಮಟ್ಟದ 48 ಭಜನಾ ತಂಡಗಳು ಇದರಲ್ಲಿ ಭಾಗವಹಿಸಲಿವೆ. ಸಂಜೆ 7.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಕೋಟ ಅಮೃತೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಆನಂದ ಸಿ.ಕುಂದರ್ ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದರು.

Click Here

ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿಗಳಾದ ಶ್ರೀ ರಮಣ ಉಪಾಧ್ಯಾಯರು ಮಾತನಾಡಿ, ಹಿಂದೆ ಶ್ರೀ ಕ್ಷೇತ್ರದಲ್ಲಿ ನೆಡೆದ ಭಜನಾ ಕಮ್ಮಟಗಳು ಈ ರಾಜ್ಯ ಮಟ್ಟದ ಭಜನಾ ಸ್ಪರ್ಧೆಗೆ ಸ್ಪೂರ್ತಿಯಾಗಿದೆ. ಸಮಾಜ ಪ್ರತಿಯೋರ್ವರು ಕೂಡಾ ಧಾರ್ಮಿಕ ಶ್ರದ್ಧೆಯನ್ನು ಬೆಳೆಸಿಕೊಳ್ಳುತ್ತಿದ್ದಾರೆ. ಧಾರ್ಮಿಕವಾಗಿ, ಸಾಂಸ್ಕøತಿಕ ವಿಕಸನಕ್ಕೆ ಭಜನೆ ಅನುಕೂಲವಾಗುತ್ತದೆ. ಈ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.

ಶ್ರೀರಾಮ ಕೋಟೇಶ್ವರ ಕಲಾ ಸಂಘದ ಅಧ್ಯಕ್ಷರಾದ ಬಿ.ಜಿ ಸೀತಾರಾಮ ಧನ್ಯ ಗೋಪಾಡಿ ಮಾತನಾಡಿ, ಭಕ್ತಿಗಾನ ನೃತ್ಯ ಜೋಡಿ ಭಜನಾ ಸ್ಪರ್ಧೆ ಹೊಸ ರೀತಿಯ ಪ್ರಯೋಗ. ಇಲ್ಲಿ ಭಜನೆ ಹೇಳುವವರಿಗೆ ಪ್ರತ್ಯೇಕ ವೇದಿಕೆ ಇರುತ್ತದೆ. ನಾಲ್ಕು ಜನ ಭಜನೆ ಹಾಡುವವರು ಇರುತ್ತಾರೆ. ಹಾಡಿಗೆ ತಕ್ಕಂತೆ ಜೋಡಿ ವೇದಿಕೆಗಳಲ್ಲಿ ಎರಡು ತಂಡದವರ ಕುಣಿತ ಭಜನೆ ನಡೆಯುತ್ತದೆ. 8 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಪ್ರತಿ ಭಜನಾ ತಂಡದಲ್ಲಿ 12ರಿಂದ 16 ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಏಕಕಾಲದಲ್ಲಿ ಎರಡು ವೇದಿಕೆಗಳಲ್ಲಿ ಸ್ಪರ್ಧೆ ನಡೆಯುತ್ತದೆ. ತಾಳ, ಹಾವ ಭಾವ, ಕುಣಿತವನ್ನು ಮಾತ್ರ ಪರಿಗಣಿಸಲಾಗುತ್ತದೆ. ಈಗಾಗಲೇ 90ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ಇಚ್ಛೆ ವ್ಯಕ್ತ ಪಡಿಸಿದ್ದು ಕೊನೆಗೆ 48 ತಂಡಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ಸಂಚಾಲಕರಾದ ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ ಜೋಡಿ ಭಜನಾ ಸ್ಪರ್ಧೆ ಇದೊಂದು ಹೊಸ ಪ್ರಯೋಗ. ಏಕಕಾಲದಲ್ಲಿ ಜೋಡಿ ಭಜನಾ ಸ್ಪರ್ಧೆ ನಡೆಯುತ್ತದೆ. ಭಜನೆ ಹೇಳುವವರು ಯಾವ ಭಜನೆ ಹೇಳುತ್ತಾರೋ ಅದಕ್ಕೆ ಕುಣಿತ ಭಜನಾ ತಂಡಗಳು ಕುಣಿಯಬೇಕು. ಇದೊಂದು ವಿಭಿನ್ನವಾದ ಸ್ಪರ್ಧೆಯಾಗಿದೆ. ಎಂದರು.

ಸುದ್ಧಿಗೋಷ್ಠಿಯಲ್ಲಿ ದೇವಸ್ಥಾನದ ಮೆನೇಜರ್ ನಟೇಶ ಕಾರಂತ, ಬಾಬಣ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here