ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ :ಮದ್ಭಗವದ್ಗೀತಾ ಆಚರಣಾ ಸಮಿತಿಯವರು ಗೀತಾ ಜಯಂತಿಯ ಪ್ರಯುಕ್ತ ಆಯೋಜಿಸಿದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ, ಕಂಠಪಾಠ(ಶ್ಲೋಕ) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಮಯೂರ್ ಅವಭ್ರತ್ ಪ್ರಥಮ ಸ್ಥಾನ, ಕಂಠಪಾಠ (ಶ್ಲೋಕ) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಕ್ಷಿತಾ ಭಟ್ ದ್ವಿತೀಯ ಸ್ಥಾನ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಸ್ಪಂದನಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.











