ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಕೊಟೇಶ್ವರ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಗದೀಶ್ ಮೊಗವೀರ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ಸಾಗಬೇಕು ಬದುಕಿಗೆ ಮೂರೇ ದಿನ ಇಂದು-ನಿನ್ನೆ-ನಾಳೆ, ನಾವು ಕಲಿತಿದ್ದನ್ನು ಇನ್ನೊಬ್ಬರಿಗೆ ಕಲಿಸಬೇಕು. ನಿರಂತರ ಕಲಿಕಾ ಪ್ರಕ್ರಿಯೆಯು ಜೀವನದ ಸಾರ್ಥಕ್ಯವನ್ನು ಕಂಡುಕೊಳ್ಳುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾರದ ಕಾಲೇಜು ಬಸ್ರೂರು ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ರಾಧಾಕೃಷ್ಣ ಶೆಟ್ಟಿ ವಿವಿಧ ವಿಭಾಗಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡುತ್ತಾ ವಿದ್ಯಾರ್ಥಿ ಜೀವನವು ಅಮೂಲ್ಯವಾಗಿದ್ದು, ನಿತ್ಯ ಪರಿಶ್ರಮ, ಶ್ರದ್ದೆಯಿಂದ ವಿದ್ಯಾಭ್ಯಾಸ ಮಾಡಿದಾಗ ವಿಶಿಷ್ಟ ಸಾಧನೆ ಮಾಡಲು ಸಾಧ್ಯ. ಅನೇಕ ಸಾಧಕರ ಜೀವನಕ್ರಮ ನಮಗೆ ಮಾದರಿಯಾಗಬೇಕು. ಹೆತ್ತವರು ಶಿಕ್ಷಣ ಜೊತೆಗೆ ಪಠ್ಯೇತರ ಚಟುವಟಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷೆಯನ್ನು ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ವಹಿಸಿದ್ದು, ವರ್ಷದ ಶಾಲಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು ಪ್ರಾಂಶುಪಾಲರಾದ ಸುಶೀಲ ಹೊಳ್ಳ ಮತ್ತು ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ವಿಶ್ವನಾಥ್ ಸಭೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಟಲ್ ಮ್ಯಾರಥಾನ್ 2022-23 ರಾಷ್ಟ್ರಮಟ್ಟದ ಮಾಡೆಲ್ ತಯಾರಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಆರನೇ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾ ವಿಭಾಗದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ ಸಾಕೆತ್ ರಂಜನ್ ಪೈ ಹಾಗೂ ಗಗನ್ ಇವರನ್ನು ಗುರುತಿಸಿ ಗೌರವಿಸಲಾಯಿತು.
ಸಾಂಸ್ಕೃತಿಕ ಸ್ಪರ್ಧಾ ವಿಜೇತರ ಪಟ್ಟಿಯನ್ನು ಅನುರಾಧ ಮತ್ತು ಸುಧಾಭಾಯಿ ಭಾಷಾ ಹಸನ್ ಸಾಬ್ ಕ್ರೀಡಾ ವಿಭಾಗದ ವಿಜೇತರ ಪಟ್ಟಿಯನ್ನು ಮಂಜುನಾಥ್ ಹೊಳ್ಳ ಮತ್ತು ಉದಯ ಮಡಿವಾಳ ಎಂ ಹಾಗೆ ದತ್ತಿನಿಧಿ ಹಾಗೂ ವಿದ್ಯಾರ್ಥಿ ಕ್ಷೇಮ ನಿಧಿ ಬಹುಮಾನಗಳ ಪಟ್ಟಿಯನ್ನು ಜಯಶ್ರೀ ಗಣೇಶ್ ಭಟ್ ಮತ್ತು ಸಂಧ್ಯಾ ವಾಚಿಸಿದರು.
ದಿವ್ಯ ಪ್ರಭಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ಬಾಬು ಶೆಟ್ಟಿ ಸ್ವಾಗತಿಸಿ ಶ್ರೀಕಾಂತ್ ವಂದಿಸಿದರು.











