ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ವಿದ್ಯಾರ್ಥಿಗಳು ಯಾವ ರೀತಿಯ ಪ್ರತಿಭೆಗಳನ್ನು ಹೊಂದಿದ್ದಾರೆಯೋ ಅದಕ್ಕೆ ಪೂರಕವಾದ ಚಟುವಟಿಕೆಗಳ ಮೂಲಕ ಬೆಳೆಯುವುದಕ್ಕೆ ಪೋಷಕರು ಮತ್ತು ಶಿಕ್ಷಕರು ಹುರಿದುಂಬಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಡೆಪ್ಯುಟಿ ಕನ್ಸರ್ವೇಟರ್ ಆಫ್ ಫಾರೆಸ್ಟ್ ಆಂಟೊನಿ ಎಸ್ ಮರಿಯಪ್ಪ ಐಎಫ್.ಎಸ್.ಹೇಳಿದರು.
ಕುಂದಾಪುರದ ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸುಜ್ಜಾನ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಜ್ಯುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಎಜ್ಯುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ಭರತ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಲಿಟ್ಲ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ವರದಿ ವಾಚಿಸಿದರು. ಬಳಿಕ ಬಹುಮಾನ ವಿತರಣೆ ಮತ್ತು ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕಿ ದೀಕ್ಷಾ ಸ್ವಾಗತಿಸಿ, ರಶ್ಮೀತಾ ವಂದಿಸಿದರು.











