ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಶ್ರೀ ಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿಯವರು ಡಿ.10ರಂದು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಕುಂದಾಪುರದಲ್ಲಿ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದಿವೀಶ್ ಪ್ರಥಮ ಸ್ಥಾನ, ತನುಶ್ರೀ ದ್ವಿತೀಯ ಸ್ಥಾನವನ್ನು ಹಾಗೂ ಭಗವದ್ಗೀತಾ ಕಂಠ ಪಾಠದಲ್ಲಿ ವರ್ಷಾ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.











