ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ :ಮದ್ಭಗವದ್ಗೀತಾ ಆಚರಣಾ ಸಮಿತಿಯವರು ಗೀತಾ ಜಯಂತಿಯ ಪ್ರಯುಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿಜೇತಳಾಗಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.











