ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸರ್ಕಾರಿ ಪ್ರೌಢಶಾಲೆ ಕಾಳಾವರದಲ್ಲಿ ಸುಮಾರು 19 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಭಡ್ತಿ ಹೊಂದಿ ಹೊನ್ನಾವರ ತಾಲೂಕಿನ ಪರಿವೀಕ್ಷಣಾಧಿಕಾರಿಯಾಗಿ ವರ್ಗಾವಣೆ ಹೊಂದಿರುತ್ತಾರೆ. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಎಸ್ ಡಿ ಎಂ ಸಿ ಯವರ ಪರವಾಗಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿಯಾಗಿ ಭಡ್ತಿ ಹೊಂದಿರುವ ಗಾಯತ್ರಿ ಅಡಿಗರು ವಹಿಸಿದ್ದರು. ಕಾಳಾವರ ಗ್ರಾಮ ಪಂಚಾಯಿತಿ ಸದಸ್ಯರಾದ ಜಯಪ್ರಕಾಶ್ ಶೆಟ್ಟಿಯವರು ಅರುಣ್ ಕುಮಾರ್ ರನ್ನು ಸನ್ಮಾನಿಸಿ ಶುಭ ಹಾರೈಸಿದರು.
ವಿದ್ಯಾರ್ಥಿಗಳು ಶಿಕ್ಷಕ ಅರುಣ್ ಅವರ ಜೊತೆಗಿನ ಭಾವನಾತ್ಮಕ ಸಂಬಂಧ ಹಂಚಿಕೊಂಡಾಗ ಸಭೆಯಲ್ಲಿ ಚಪ್ಪಾಳೆ ಸದ್ದು ತೇಲಿ ಬಂತು. ಎಲ್ಲಾ ಶಿಕ್ಷಕರು ತಮ್ಮ ಸೇವೆಯ ಸಂದರ್ಭದ ವಿಶೇಷ ಘಟನೆಗಳನ್ನು ಹಂಚಿಕೊಂಡು ಭಾವುಕರಾದರು. ಸನ್ಮಾನಕ್ಕೆ ಉತ್ತರಿಸುತ್ತಾ ತಮ್ಮ ಸುಧೀರ್ಘ ಸೇವೆಯಲ್ಲಿ ಸಹಕರಿಸಿದ ಎಲ್ಲರನ್ನೂ ನೆನಪಿಸಿಕೊಂಡರು. ಸಭೆಯಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ ಸತೀಶ್ ಜೋಗಿಯವರು ಉಪಸ್ಥಿತರಿದ್ದರು.
ಶಿಕ್ಷಕ ಗಣೇಶ ಶೆಟ್ಟಿಗಾರ್ ವಂದಿಸಿದರು. ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿ , ವಿದ್ಯಾರ್ಥಿನಿಯರು ಕೇಕ್ ಕಟಿಂಗ್ ವ್ಯವಸ್ಥೆ ಮಾಡಿದ್ದು ಅನಿರೀಕ್ಷಿತವಾಗಿ ಅರುಣ್ ಕುಮಾರ್ ಪ್ರೀತಿ ಹಂಚಿಕೊಂಡಿದ್ದು ವಿಶೇಷವಾಗಿತ್ತು.











