ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರು ಮತ್ತು ಉಪನ್ಯಾಸಕರ ಬಳಗ ಕುಂದಾಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಗೌರವಾಧ್ಯಕ್ಷರಾದ ಉದಯ ಬಳ್ಕೂರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಕೆರಾಡಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ನಾಗರಾಜ್ ಹೆಮ್ಮಾಡಿ ಆಯ್ಕೆಯಾದರು.
ಪ್ರಧಾನ ಕಾರ್ಯದರ್ಶಿಗಳಾಗಿ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿಬಿ ಇವರನ್ನು ಆಯ್ಕೆ ಮಾಡಲಾಯಿತು.











