ಕುಂದಾಪುರ ಮಿರರ್ ಸುದ್ದಿ…
ಕೋಟ: ಕಾರಂತರು ವಿಶ್ವಮಾನ್ಯರು ಅವರ ವ್ಯಕ್ತಿತ್ವ ನಮ್ಮ ಮಕ್ಕಳಲ್ಲಿ ಮೂಡಿಸುವ ಪ್ರಯತ್ನವಾಗುವುದರೊಂದಿಗೆ, ಕಾರಂತರನ್ನು ಮುಂದಿನ ಪೀಳಿಗೆಗೆ ನೆನಪಿಸುವಂತಹ ಕಾರ್ಯವನ್ನು ಸರ್ಕಾರ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ವಿಷಾಧ ವ್ಯಕ್ತಪಡಿಸಿದರು.
ಸಾಲಿಗ್ರಾಮ ಕಾರ್ಕಡ ಗೆಳೆಯರ ಬಳಗದ ವತಿಯಿಂದ ಡಾ.ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ, ಗಾನನಮನ ಸಂಸ್ಮರಣೆ, ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಕಾರಂತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿಆರಾಧನಾ ಕ್ಷೇತ್ರಗಳು ಮತ್ತು ಸಾಂಸ್ಕೃತಿಕ ತಾಣಗಳು ಸ್ಥಳೀಯ ವ್ಯವಸ್ಥೆಗಳ ಅಡಿಯಲ್ಲೇ, ಸರ್ಕಾರದ ಮೇಲುಸ್ತುವಾರಿಯಲ್ಲಿ ಇದ್ದಾಗ ಅದು ಜನಸಾಮಾನ್ಯರ ಕಾರ್ಯಕ್ರಮ ಆಗುತ್ತದೆ. ಯಾವುದೂ ಶಕ್ತಿಯ ಪ್ರದರ್ಶನವಾಗಬಾರದು. ಕಾರಂತರು ಇದ್ದಿದ್ದರೆ ಈ ಬಗ್ಗೆ ಅವರ ಧ್ವನಿ ಗಟ್ಟಿಯಾಗುತ್ತಿತ್ತು ಎಂದು ಹೇಳಿದರು.
ಹಿರಿಯ ಸಾಹಿತಿ ಕುಂದಾಪುರದ ಎ.ಎಸ್.ಎನ್.ಹೆಬ್ಬಾರ್ ಕಾರಂತ ಸಂಸ್ಮರಣೆ ಮಾಡಿದರು.
ಇದೇ ಸಂದರ್ಭ ಕಾರಂತರ ಒಡನಾಡಿ ಪಾಂಡೇಶ್ವರ ಚಂದ್ರಶೇಖರ ಚಡಗ ಅವರಿಗೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಿ ಗೌರವಿಸಲಾಯಿತು.
ಇದಕ್ಕೂ ಮುನ್ನ ಕಾರ್ಯಕ್ರಮವನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.
ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ, ಮಂಗಳೂರಿನ ಸಾಹಿತಿ ಎಚ್.ಜನಾರ್ಧನ ಹಂದೆ, ಕ.ಸಾ.ಪದ ಮಾಜಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕೋಟ ಸಿ.ಎ ಬ್ಯಾಂಕ್‍ನ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಉಪಸ್ಥಿತರಿದ್ದರು.
ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಸ್ವಾಗತಿಸಿದರು. ಕಾರ್ಯದರ್ಶಿ ಕೆ.ಚಂದ್ರಕಾಂತ ನಾಯರಿ ವಂದಿಸಿದರು. ಉಪಾಧ್ಯಕ್ಷ ಕೆ.ಶಶಿಧರ ಮಯ್ಯ ಕಾರ್ಯಕ್ರಮ ನಿರೂಪಿಸಿದರು.











