ಕುಂದಾಪುರ ಮಿರರ್ ಸುದ್ದಿ…
ಕೋಟ: 28 ವರ್ಷಗಳ ಕಾಲ ಕಾಸನಗುಂದು ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವೃತ್ತಿ ಜೀವನದಿಂದ ನಿವೃತ್ತಿ ಹೊಂದಿದ ಜೂಲಿಯನ ರೊಡ್ರಿಗಸ್ ಅವರಿಗೆ ಅಂಗನವಾಡಿ ವಲಯ ಮಟ್ಟದ ಬೀಳ್ಕೊಡುಗೆ ಸಮಾರಂಭವನ್ನು ಕೋಟ ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಮೀನಾಕ್ಷಿ ಮಾತನಾಡಿ ಯಾವುದೇ ರೀತಿಯ ಕರ್ತವ್ಯ ಲೋಪವಿಲ್ಲದೆ ಸುಧೀರ್ಘ ಸೇವೆ ಸಲ್ಲಿಸಿದ ಇವರ ಕರ್ತವ್ಯ ನಿಷ್ಠೆ ಎಲ್ಲರಿಗೂ ಮಾರ್ಗದರ್ಶನವಾಗಿದೆ ಎಂದರು. ಕೋಟ ವಲಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು. ಕೋಟ ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.











