ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ದಿಲ್ಲಿಯಲ್ಲಿ ಜನವರಿ 26ರಂದು ನಡೆದ 75ನೇ ಗಣರಾಜ್ಯೋತ್ಸವದ ಪಥಸ೦ಚಲನದಲ್ಲಿ ಭಾಗವಹಿಸಿದ ಕುಂದಾಪುರದ ಪ್ರತಿಭೆ, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ವಿದ್ಯಾರ್ಥಿನಿ, ಹೆಚ್.ಎಂ.ಎಂ. ಮತ್ತು ವಿ.ಕೆ.ಆರ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಗಾರ್ಗಿದೇವಿಗೆ ಶಾಲಾಡಳಿತ ವತಿಯಿಂದ ಅದ್ಧೂರಿ ಪುರಮೆರವಣಿಗೆ ನಡೆಯಿತು.
ಶುಕ್ರವಾರ ಬೆಳಿಗ್ಗೆ ಕುಂದಾಪುರದ ಶಾಸ್ತ್ರೀ ವೃತ್ತದಿಂದ ತೆರೆದ ವಾಹನದಲ್ಲಿ ಆರಂಭಗೊಂಡ ಮೆರವಣಿಗೆ ಪಾರಿಜಾತಾ ವೃತ್ತ, ಹಳೆ ಬಸ್ ನಿಲ್ದಾಣದ ಮೂಲಕ ಸಾಗಿ ಹೊಸ ಬಸ್ ನಿಲ್ದಾಣದಲ್ಲಿ ತಿರುಗಿ ಮತ್ತೆ ಶಾಸ್ತ್ರೀ ವೃತ್ತದಲ್ಲಿ ಸಮಾಪ್ತಿಗೊಂಡಿತು. ಈ ಸಂದರ್ಭ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪೋಷಕರು, ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ವರ್ಗ ಸಾರ್ವಜನಿಕರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.
ಸಂದರ್ಭ ಪ್ರತಿಕ್ರಿಯಿಸಿರುವ ಗಾರ್ಗೀದೇವಿ ,ನಿರೀಕ್ಷೆ ಮಾಡದೇ ದೊರೆತ ಅವಕಾಶ. ಇದು ದೊರೆಯಲು ನಮ್ಮ ಶಾಲೆ ಹಾಗೂ ಮನೆಯವರ ಪ್ರೋತ್ಸಾಹ ಕಾರಣ. ಕಲಾ ಪ್ರಕಾರಕ್ಕೆ ಸಂದ ಗೌರವ. ಬದುಕಿನ ಅವಿಸ್ಮರಣೀಯ ಘಟನೆ ಎಂದಿದ್ದಾರೆ. ಪ್ರದಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ನಡೆದ ಪರೀಕ್ಷಾ ಪೇ ಚರ್ಚಾ ಸಮಾರಂಭದಲ್ಲಿ ನೃತ್ಯ ಪ್ರದರ್ಶನ ನೀಡಿರುವ ಗಾರ್ಗೀದೇವಿ 2023-24ನೇ ಸಾಲಿನ ರಾಷ್ಟ್ರಮಟ್ಟದ ಕಲೋತ್ಸವ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.











