ಕೊಲ್ಲೂರು :ಶಿಕ್ಷಣದ ಹೊರತಾಗಿ ವ್ಯವಹರಿಸುವ ಶಿಕ್ಷಕರನ್ನು ಸರಿದಾರಿಗೆ ತರಲು ಬದ್ಧ – ಶಿಕ್ಷಣ ಸಚಿವ ಮಧು ಬಂಗಾರಪ್ಪ

0
199

Click Here

Click Here

ಕುಂದಾಪುರ ಮಿರರ್ ‌ಸುದ್ದಿ…
ಕುಂದಾಪುರ: ಮಕ್ಕಳೆಂದರೆ ದೇವರು. 76 ಸಾವಿರ ಶಾಲೆಗಳಲ್ಲಿ ಓದುವ 1 ಕೋಟಿ 20 ಲಕ್ಷ ವಿದ್ಯಾರ್ಥಿಗಳ ಸೇವೆ ಮಾಡುವ ಭಾಗ್ಯ ನನಗೆ ಸಿಕ್ಕಿದೆ. ಶಿಕ್ಷಣ ಇಲಾಖೆಯ ಹಣ ಮಕ್ಕಳ ಶಿಕ್ಷಣಕ್ಕೆ ಮೀಸಲಾಗಿರುತ್ತದೆ. ಶಿಕ್ಷಕರು ಮಕ್ಕಳ ಶಿಕ್ಷಣ ದೈಹಿಕ ಶಿಕ್ಷಣದ ಹೊರತಾಗಿ ಬೇರೆ ವ್ಯವಹಾರಗಳ ಕಡೆಗೆ ತಲೆ ಹಾಕಿದರೆ ಅದನ್ನು ನಿಯಂತ್ರಿಸುವುದು ಹೇಗೆಂದು ನನಗೆ ಗೊತ್ತಿದೆ ಮತ್ತು ಅಂತಹಾ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕೊಲ್ಲೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ನಮ್ಮ ಸರ್ಕಾರ ಮಕ್ಕಳ ಪೌಷ್ಟಿಕತೆಗೆ ಆದ್ಯತೆ ನೀಡಿದ್ದು, ಪ್ರತಿ ದಿನ ಎರಡು ಮೊಟ್ಟೆ ನೀಡಲಾಗುತ್ತಿದೆ. ಪ್ರತೀ ವರ್ಷ 500 ಶಾಲೆಯಂತೆ 3000 ಕೆಪಿಎಸ್ ಶಾಲೆಗಳನ್ನು ತೆರುವು ಯೋಜನೆ ಇದೆ ಎಂದರು. ಸರ್ಕಾರಿ ಶಾಲೆಯ ಮಕ್ಕಳಿ ನೀಟ್ ಕೋಚಿಂಗ್ ಉಚಿತವಾಗಿ ನೀಡುವ ಯೋಜನೆಯ ಬಗ್ಗೆ ಚಿಂತಿಸಲಾಗುತ್ತಿದೆ.

Click Here

ಪ್ರಣಾಳಿಕೆ ಉಪಾಧ್ಯಕ್ಷನಾಗಿದ್ದ ಖುಷಿ ಇದೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುತ್ತಿದೆ. ಅಯೋಧ್ಯಾ ರಾಮ ನಮ್ಮದು ಎಂದು ಬಿಂಬಿಸಿ ಚುನಾವಣೆ ಎದುರಿಸುತ್ತಿದ್ದಾರೆ. ಆದರೆ ನಾವು ಹೇಳುತ್ತೇವೆ ದೇಶದ ಉಳಿದೆಲ್ಲಾ ರಾಮ ನಮ್ಮದು. ಈ ಬಾರಿ ಕಾರವಾರ, ಉಡುಪಿ ಚಿಕ್ಕ ಮಗಳೂರು, ದಕ್ಷಿಣ ಕನ್ನಡ ಚುನಾವಣೆ ಉಸ್ತುವಾರಿ ನಾನು ವಹಿಸಿದ್ದು, ಮೂರು ಕ್ಷೇತ್ರಗ:ಳಲ್ಲಿ ಯಾರೇ ಅಭ್ಯರ್ಥಿಗಳಾದರೂ ಒಮ್ಮತದಿಂದ ಚುನಾವಣೆ ಎದುರಿಸಿ ಗೆಲವು ಸಾಧಿಸುತ್ತೇವೆ ಎಂದರು. ನಾರಾಯಣ ಗುರುಗಳ ಅಕಾಡೆಮಿ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದ ಅವರು, ಹಿಂದುಳಿದ ವರ್ಗಗಳ ಆಯೋಗದ ವರದಿ ಜ್ಯಾರಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದವರು ಇದೇ ಸಂದರ್ಭ ಹೇಳಿದರು. ಸುದ್ಧಿ ಗೋಷ್ಟಿಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಹಿರಿಯ ಮುಖಂಡರಾದ ರಾಜು ಪೂಜಾರಿ ಮತ್ತು ಬಾಬು ಹೆಗ್ಡೆ, ರಮೇಶ್ ಗಾಣಿಗ ಕೊಲ್ಲೂರು ಮೊದಲಾದವರು ಉಪಸ್ಥಿತರಿದ್ದರು

Click Here

LEAVE A REPLY

Please enter your comment!
Please enter your name here