ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನದ ಲೋಕಾರ್ಪಣೆ – ಹಸಿರು ಹೊರೆಕಾಣಿಕೆ ಮೆರವಣಿಗೆ

0
378

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬ್ರಹ್ಮಾವರ : ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನದ ಲೋಕಾರ್ಪಣೆಗೆ ಅಂಗವಾಗಿ ಫೆಬ್ರವರಿ 13 ರಿಂದ ನಾನಾ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡು ಬುಧವಾರ ಬಿಂಬ ಪ್ರತಿಷ್ಠಾಪನೆ ಗೊಳ್ಳಲಿರುವ ಅಂಗವಾಗಿ ಭಾನುವಾರ ಹಸಿರುಹೊರೆಕಾಣಿಕೆ ಮೆರವಣಿಗೆ ಜರುಗಿತು.

Click Here

ಮುದ್ದೂರು ಬಸ್ ನಿಲ್ದಾಣದಬಳಿಯಲ್ಲಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಪರಮಪೂಜ್ಯ ಶ್ರೀಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಯವರು ಹೊರೆ ಕಾಣಕೆ ಮೆರವಣಿಗೆಗೆ ಚಾಲನೆ ನೀಡಿದರು.

ನಾನಾ ಭಾಗದಿಂದ ಬಂದ ಹೊರೆಕಾಣಿಕೆ ಮೆರವಣಿಗೆ ಕಜ್ಕೆ ಶಾಖಾ ಮಠದ ಬಳಿ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಸಾಗಿ ಬಂತು . ನಾನಾ ಭಜನಾ ತಂಡದಿಂದ ಭಜನೆ ಮಹಿಳೆಯರ ಪೂರ್ಣಕುಂಭ ಸ್ವಾಗತ ಮೆರವಣಿಗೆಯ ಮೆರಗು ಹೆಚ್ಚಿಸಿತ್ತು .
ದೇವಸ್ಥಾನ ನಿರ್ಮಾಣ ಸಮಿತಿ ಮತ್ತು ಮಹಾ ಕುಂಭಾಭಿಷೇಕ ಸಮಿತಿ, ವಿವಿಧ ಉಪಸಮಿತಿಯ ಅಧ್ಯಕ್ಷರುಗಳು ,ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಗಣ್ಯರು, ಭಕ್ತಾಧಿಗಳು ಭಾಗವಹಿಸಿದ್ದರು.

Click Here

LEAVE A REPLY

Please enter your comment!
Please enter your name here