ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಕುಂದಾಪುರ ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ ನ ಹೇರಿಕುದ್ರು ನಡುಮನೆ ಗಂಗಾಧರ ಶೆಟ್ಟಿ ಅವರನ್ನು ನಾಮನಿರ್ದೇಶನಗೊಳಿಸಿ ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ರಚಿಸಲಾದ ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಮಿತಿಗೆ ತಮ್ಮನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.











