ಬೈಂದೂರು :ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮಾಹಿತಿ ಕಾರ್ಯಕ್ರಮ ‘ಪುಷ್ಟಿ’ 2024

0
626

Click Here

Click Here

ಕುಂದಾಪುರ ಮಿರರ್ ಸುದ್ದಿ…

ನಾವುಂದ :ಶುಭದಾ ಆಂಗ್ಲ ಮಾಧ್ಯಮ ಶಾಲೆ ನಾವುಂದದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್. ಎಸ್. ಎಲ್‌. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮಾಹಿತಿ ಕಾರ್ಯಕ್ರಮ ‘ಪುಷ್ಟಿ’ 2024 ಆಯೋಜಿಸಲಾಯಿತು.

Click Here

ಸಮರ್ಪಣಾ ಎಜುಕೇಶನಲ್ ಟ್ರಸ್ಟ್ (ರಿ)ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿ ಜೀವನದಲ್ಲಿ ಹತ್ತನೇ ತರಗತಿ ಪ್ರಮುಖವಾದ ಕಾಲಘಟ್ಟವಾಗಿದ್ದು ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕಲಿಕೆ ಅತ್ಯುತ್ತಮವಾಗಬೇಕು ಓದುವ ಆಸಕ್ತಿ ದಿನದಿಂದ ದಿನಕ್ಕೆ ಹೆಚ್ಚಾಗಬೇಕು. ವಿದ್ಯಾರ್ಥಿಗಳೇ ಸಮಯ ವ್ಯರ್ಥ ಮಾಡದೇ ಓದಿ ಭವಿಷ್ಯ ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು. ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಶಿಕ್ಷಕರಾದ ಕರುಣಾಕರ ಶೆಟ್ಟಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪರೀಕ್ಷಾ ಪೂರ್ವ ತಯಾರಿಯ ಕುರಿತು ಸಾಕಷ್ಟು ವಿಚಾರಗಳನ್ನು ತಿಳಿಸಿದರು. ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ರವಿದಾಸ್ ಶೆಟ್ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಜನತಾ ಕಾಲೇಜಿನ ಉಪನ್ಯಾಸಕರಾದ ಉಮೇಶ್ ನಾಯ್ಕ್ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Click Here

LEAVE A REPLY

Please enter your comment!
Please enter your name here