ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ (ರಿ.) ಕುಂಭಾಶಿ ಇದರ ಇದರ ೬ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ವಿಕಸನ – ೨೦೨೪ ಅಶಕ್ತ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ , ಸಾಧಕ ಕೃಷಿಕರಿಗೆ ಸಮ್ಮಾನ ಕಾರ್ಯಕ್ರಮವು ಫೆ ೨೪ ಶನಿವಾರದ ಸಂಜೆ ಗಂಟೆ ೪ಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ಸ‘ಗೃಹದಲ್ಲಿ ಜರಗಲಿದೆ. ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ (ರಿ.) ಕುಂಭಾಸಿ ಇದರ ಪ್ರವರ್ತಕ ಕೊರ್ಗಿ ವಿಠಲ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸಾಧಕ ಕೃಷಿಕರನ್ನು ಸಮ್ಮಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ್ ಇದರ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ , ಉದ್ಯಮಿ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ ಕುಂದಾಪುರ, ಕುಂಭಾಶಿ ಗ್ರಾಮ ಪಂಚಾಯತ್ ಇದರ ಅಧ್ಯಕ್ಷ ಆನಂದ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ಕೆ. ಕೃಷ್ಣಪ್ರಸಾದ್ ಅಡ್ಯಂತಾಯ, ಕುಂದಾಪುರದ ಕ್ಷೇತ್ರ ಶಿಕ್ಷಣಾದಿಕಾರಿ ಶೋಭಾ ಎಸ್.ಶೆಟ್ಟಿ ಹಾಗೂ ಭವಾನಿ ವಿ.ಶೆಟ್ಟಿ ಅವರು ಭಾಗವಹಿಸಲಿದ್ದಾರೆ . ಸಂಜೆ ಅಂತರಾಷ್ಟ್ರೀಯ ಜಾದೂ ಪ್ರಶಸ್ತಿ ವಿಜೇತ ಜಾದೂಗಾರ ಪ್ರಕಾಶ್ ಹೆಮ್ಮಾಡಿ ಮತ್ತು ನೇತ್ರಾವತಿ ಹೆಮ್ಮಾಡಿ ಇವರಿಂದ ಜಾದೂ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.











