ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಯಾಗಿ ನಿವೇದಿತಾ ಪ್ರೌಢಶಾಲೆಯ ಶಿಕ್ಷಕರಾದ ಪ್ರದೀಪ್ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಜೀವನದಲ್ಲಿ ಸಂಸ್ಕಾರಗಳನ್ನು ಅಳವಡಿಸಿ ಕೊಂಡು ತಮ್ಮ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಪೂರ್ವಿಯನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ರಾಗಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗಣಿತ ಶಾಸ್ತ್ರ ಉಪನ್ಯಾಸಕಿ ಚೈತ್ರ ಪೂಜಾರಿ ಸ್ವಾಗತಿಸಿದರು, ಉಪನ್ಯಾಸಕಿ ನಿಧಿ ವಂದಿಸಿದರು, ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.











