ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ( ರಿ.) ಇವರ ಆಶ್ರಯದಲ್ಲಿ ಸಾಯ್ಬರಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಹಾಗೂ ಪರೀಕ್ಷೆಯ ಪೂರ್ವ ತಯಾರಿ ಕಾರ್ಯಾಗಾರ ಜರುಗಿತು.
ಕಾರ್ಯಾಗಾರದಲ್ಲಿ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗಿರುವ ಒತ್ತಡ ಮತ್ತು ನಿರ್ವಹಣೆ, ಭವಿಷ್ಯದ ಸವಾಲುಗಳು, ಪರೀಕ್ಷೆಗೆ ಯಾವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎನ್ನುವ ಬಗ್ಗೆ 5, 6 ಮತ್ತು 7ನೆ ತರಗತಿಯ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಗಿರೀಶ್ ಎಂ ಎನ್ ಇವರು ಭಾಗವಹಿಸಿದರು.
ಮುಖ್ಯೋಪಾಧ್ಯಾಯಿನಿ ಜಯಂತಿ ಸ್ವಾಗತಿಸಿ ಸಹ ಶಿಕ್ಷಕ ರಾಮಚುಂದ್ರ ವಾಕೂಡ ವಂದಿಸಿದರು. ಸಹ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.











