ಕುಂದಾಪುರ: ಕೊಚುವೇಲಿ-ಮುಂಬೈ ರೈಲಿಗೆ ಕುಂದಾಪುರದಲ್ಲಿ ನಿಲುಗಡೆ – ಬಿಜೆಪಿಯಿಂದ ಹರ್ಷ

0
298

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮಧ್ಯಾಹ್ನ ಕುಂದಾಪುರ ತಲುಪುವ ಕೊಚುವೇಲಿ-ಮುಂಬೈ ಲೋಕಮಾನ್ಯ ತಿಲಕ್ ರೈಲಿಗೆ ಗುರುವಾರದಿಂದ ನಿಲುಗಡೆ ಘೋಷಣೆಯಾಗಿದ್ದು, ಮಧ್ಯಾಹ್ನ ಕುಂದಾಪುರ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದರು.

Click Here

ಈ ಸಂದರ್ಭ ಮಾತನಾಡಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕುಂದಾಪುರ ರೈಲ್ವೇ ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ಹೋರಾಟದ ಫಲ ಮತ್ತು ಜನರ ಬೇಡಿಕೆಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಸ್ಪಂದಿಸಿದ ಪರಿಣಾಮ ರೈಲು ನಿಲುಗಡೆಯಾಗಿದೆ ಎಂದರು.

ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸುಧೀರ್ ಕೆ.ಎಸ್. ಕುಂದಾಪುರ ಯುವಮೋರ್ಚ ಅಧ್ಯಕ್ಷ ಅವಿನಾಶ್ ಉಳ್ತೂರು, ರೈಲ್ವೆ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಗಣೇಶ್ ಪುತ್ರನ್, ವಿವಿಧ ಮೋರ್ಛಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಮೊದಲಾದವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here