ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಪರಿಸರ ಸಂರಕ್ಷಣೆ, ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡುತ್ತಾ ಯುವ ಜನತೆಯಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಕಾರ್ಯವನ್ನು ನಮ್ಮ ನಾಡ ಒಕ್ಕೂಟ ಮಾಡುತ್ತಿದೆ. ಗಿಡಗಳನ್ನು ನೆಡುವ ಮೂಲಕ ಪರಿಸರದ ಸಂರಕ್ಷಣೆಯಲ್ಲಿ ನಾಗರಿಕ ಸಮಾಜದ ಕರ್ತವ್ಯದ ಅರಿವು ಮೂಡಿಸಲಾಗುತ್ತಿದೆ. ಶಿಕ್ಷಣದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಅವರ ಜವಬ್ದಾರಿ ಹೆಚ್ಚಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ನಮ್ಮ ನಾಡ ಒಕ್ಕೂಟದ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಹುಸೈನ್ ಹೈಕಾಡಿ ಹೇಳಿದರು.


ಅವರು ಸೋಮವಾರ ರಿಫಾಯೀ ಜುಮ್ಮಾ ಮಸೀದಿಯಲ್ಲಿ ನಮ್ಮ ನಾಡ ಒಕ್ಕೂಟ ಕುಂದಾಪುರ ಘಟಕ ಮತ್ತು ರಿಫಾಯೀ ಜುಮ್ಮಾ ಮಸೀದಿ ಮೂಡುಗೋಪಾಡಿ ಇದರ ಜಂಟಿ ಆಶ್ರಯದಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ನೊಂದಣಿ ಶಿಬಿರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮುಡುಗೋಪಾಡಿ ರಿಫಾಯೀ ಜುಮ್ಮಾ ಮಸೀದಿ ಅಧ್ಯಕ್ಷ ಜಿ.ಮಹಮ್ಮದ್ ಬ್ಯಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನಮ್ಮ ನಾಡ ಒಕ್ಕೂಟದ ಉಡುಪಿ ಜಿಲ್ಲಾಧ್ಯಕ್ಷ ಮುಸ್ತಾಕ್ ಅಹಮದ್ ಬೆಳ್ವೆ, ನಮ್ಮ ನಾಡ ಒಕ್ಕೂಟದ ಹೆಬ್ರಿ ಘಟಕದ ಅಧ್ಯಕ್ಷ ರಫೀಕ್ ಅಜೇಕಾರ್, ನಮ್ಮ ನಾಡ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌ.ಜಮೀರ್ ಅಹಮ್ಮದ್ ರಕಾದಿ, ಕುಂದಾಪುರ ನಮ್ಮ ನಾಡ ಒಕ್ಕೂಟದ ಉಪಾಧ್ಯಕ್ಷ ಮುಸ್ತಾಕ್ ಅಹಮ್ಮದ್ ಕುಂದಾಪುರ, ಅಬ್ದಲ್ ಖಾದರ್, ಆರೀಸ್ ಹುಸೈನ್, ಆಲ್ತಾಫ್, ಸಿದ್ಧೀಖ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ರಿಫಾಯಿ ಜುಮ್ಮಾ ಮಸೀದಿಯ ಕಾರ್ಯದರ್ಶಿ ಬಿ.ಎಮ್.ನಸೀರ್ ಸ್ವಾಗತಿಸಿದರು. ಅಬ್ದುಲ್ ಶುಕುರ್ ಬೆಳ್ವೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.











