ಬೈಂದೂರು :ನಿಮ್ಮ ಮತಕ್ಕೆ ನ್ಯಾಯ ಕೊಡುವ ಜವಾಬ್ದಾರಿ ನನ್ನದು – ಗೀತಾ ಶಿವರಾಜಕುಮಾರ್

0
427

Click Here

Click Here

ಕುಂದಾಪುರ ಮಿರರ್ ಸುದ್ದಿ…

ನಾಡ: ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ಆಡಳಿತ ವೈಖರಿ ಜನಸಾಮಾನ್ಯರಿಗೆ ರಾಜ್ಯ ಸರ್ಕಾರದ ಮೂಲಕ ಅವರು ನೀಡಿದ ವಿಶೇಷ ಕೊಡುಗೆಗಳು, ಅದರಲ್ಲೂ ರೈತರಿಗೆ ಕೃಷಿಕರಿಗೆ ಉಚಿತ ಪಂಪ್ ಸೆಟ್ ಯೋಜನೆ ಬಿ ಜನಾರ್ದನ ಪೂಜಾರಿಯವರ ಸಾಲ ಸೌಲಭ್ಯಗಳ ಯೋಜನೆ ಮೊದಲಾದ ಯೋಜನೆಗಳ ಮೂಲಕ ಜನರ ಆರ್ಥಿಕ ಬದುಕನ್ನು ಭದ್ರಗೊಳಿಸಿದ ಬಂಗಾರಪ್ಪನವರ ಮಗಳಾಗಿ ನಾನು ನನ್ನ ಪ್ರಾಮಾಣಿಕ ಸೇವೆ ಸಲ್ಲಿಸಲು ಬದ್ಧಳಾಗಿದ್ದೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಅವರು ಭಾನುವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಡ, ಆಲೂರು, ನಾವುಂದದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

Click Here

ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತವಾಗಿ ಜೆಡಿಎಸ್ನಿಂದ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದು ಈ ಕ್ಷೇತ್ರ ನನಗೇನು ಹೊಸದಲ್ಲ ಇಲ್ಲಿನ ಜನ ಜೀವನದ ಬಗ್ಗೆ ನಾನು ತಿಳಿದುಕೊಂಡಿದ್ದೇನೆ ಗ್ರಾಮೀಣ ಭಾಗದಲ್ಲಿ ಇರುವ ಮೂಲಭೂತ ಸಮಸ್ಯೆಗಳ ಬಗ್ಗೆಯೂ ಅರಿವಿದೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಂದರೆ ಗ್ರಾಮೀಣ ಭಾಗಗಳ ಸಮಸ್ಯೆಗಳಿಗೆ ಪ್ರಾಮಾಣಿಕ ಪ್ರಯತ್ನಗಳ ಮೂಲಕ ಪರಿಹಾರಕ್ಕೆ ಯತ್ನಿಸುತ್ತೇನೆ ಎಂದರು.

ಇದೇ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ ಗೋಪಾಲ ಪೂಜಾರಿಯವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಸುಳ್ಳುಗಳ ಸರಮಾಲೆಗಳನ್ನು ಹೆಣೆದು ಸೋಲಿಸುವ ವ್ಯವಸ್ಥೆ ನಡೆಸಲಾಯಿತು. ಆದರೆ ಕಾಂಗ್ರೆಸ್ ಸರಕಾರ ಅಸ್ತಿತ್ವದಲ್ಲಿದ್ದಾಗ ನಾಡ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗಗಳಿಗೆ ಅತಿ ಹೆಚ್ಚು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎನ್ನುವುದನ್ನು ಈ ಊರಿನ ಜನ ಮರೆತಿಲ್ಲ ಈ ಬಾರಿಯ ಚುನಾವಣೆಯಲ್ಲಿ ಜನ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮತದಾನ ಮಾಡುತ್ತಾರೆ ಎನ್ನುವುದನ್ನು ನಾನು ನಂಬಿದ್ದೇನೆ ಎಂದರು. ಬಂಗಾರಪ್ಪ ನನ್ನ ರಾಜಕೀಯ ಗುರುಗಳು ಅವರ ಋಣ ನನ್ನ ಮೇಲಿದೆ ಆ ನಿಟ್ಟಿನಲ್ಲಿ ನಾವು ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡಲೇಬೇಕಿದೆ ನಾನು ಮಾಡಿದ ಕೆಲಸಗಳ ಆಧಾರದ ಮೇಲೆ ನನ್ನೂರಿನ ಜನ ಗೀತಾ ಶಿವರಾಜಕುಮಾರ್ ಗೆ ಮತ ನೀಡಿ ಗೆಲ್ಲಿಸಬೇಕಾಗಿದೆ ಎಂದರು.

ಮಾಜಿ ಶಾಸಕ ಬಿ. ಎಂ. ಸುಕುಮಾರಶೆಟ್ಟಿ ಮಾತನಾಡಿ, ನಾನು ಶಾಸಕನಾಗಿದ್ದ ಅವಧಿಯಲ್ಲಿ ಅತ್ಯಂತ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಇದು ಸುಕುಮಾರಶೆಟ್ಟಿ ಮಾಡಿರುವ ಕೆಲಸವೇ ಹೊರತು ಎಂಪಿಯ ಸಾಧನೆ ಅಲ್ಲ. ಎಂಪಿ ಏನು ಮಾಡಿದ್ದಾರೆ? ರಾಘವೇಂದ್ರ ಅವರು ಎಂಪಿ ಆದಮೇಲೆ ಇಡೀ ಬೈಂದೂರು ಮತ್ತು ಕುಂದಾಪುರದಲ್ಲಿ ಭೂ ವ್ಯವಹಾರದಲ್ಲಿ ತೊಡಗಿದ್ದು ಹೊರತು ಅಭಿವೃದ್ಧಿಯತ್ತ ದೃಷ್ಟಿ ಹಾಯಿಸಿಲ್ಲ. ಜನಪ್ರತಿನಿಧಿಗಳು ನಮ್ಮ ಸಮಸ್ಯೆಗಳಿಗೆ ಸ್ಪಂದಿಸಬೇಕೇ ಹೊರತು ನಮ್ಮ ಊರಿನಲ್ಲಿ ಭೂ ವ್ಯವಹಾರ ನಡೆಸುವುದಲ್ಲ ಆದುದರಿಂದ ಈ ಬಾರಿ ಜನ ಅಭಿವೃದ್ಧಿಯತ್ತ ಮನಸ್ಸು ಮಾಡಿದ್ದಾರೆ ಎಂದರು.

ಕಾಂಗ್ರೆಸ್ಸಿನ ಹಿರಿಯ ಮುಖಂಡ ಪ್ರಕಾಶ್ ಚಂದ್ರ ಶೆಟ್ಟಿ ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ಹಾಗೂ ಕೇಂದ್ರ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದ 25 ಗ್ಯಾರಂಟಿಗಳ ಬಗ್ಗೆ ಕಾರ್ಯಕರ್ತರಲ್ಲಿ ಮತ್ತು ಮತದಾರರಲ್ಲಿ ವಿವರಿಸಿದರು. ಹುಣಸೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಹೊಡಿಬೆಟ್ಟು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಚುನಾವಣಾ ಉಸ್ತುವಾರಿ ಹಾಗೂ ಇನ್ನಿತರ ಕಾಂಗ್ರೆಸ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು

Click Here

LEAVE A REPLY

Please enter your comment!
Please enter your name here