ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ತೆಕ್ಕಟ್ಟೆ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ವಿಶ್ವ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ವಿಶ್ವದ ಮಹಾನ್ ನಾಯಕನ ಆದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನೆಡೆಯುವಂತೆ ಕರೆ ನೀಡಿದರು.
ಪಂಚಾಯತ್ ಕಾರ್ಯದರ್ಶಿ ಚಂದ್ರ,ಸಿಬ್ಬಂದಿಗಳಾದ ಭಾರತಿ, ಶ್ರೀನಿವಾಸ ಪೂಜಾರಿ ಮೊದಲಾದವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ತೆಕ್ಕಟ್ಟೆ ಪಂಚಾಯತ್ ಕಾರ್ಯದರ್ಶಿ ಚಂದ್ರ ಸ್ವಾಗತಿಸಿ ಭಾರತಿ ಶೆಟ್ಟಿ ವಂದಿಸಿದರು.











