ಯುವ ಕಾಂಗ್ರೆಸ್ ಕುಂದಾಪುರ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸಾಮಾಜಿಕ ನ್ಯಾಯ, ಸಮಾನತೆ , ಸ್ವಾತಂತ್ರ್ಯ ಮತ್ತು ಹಕ್ಕುಗಳನ್ಬು ನೀಡಿರುವ ಅಂಬೇಡ್ಕರ್ ರಚಿಸಿಕೊಟ್ಟ ಸಂವಿಧಾನದಿಂದಲೇ ನಾವಿಂದು ನೆಮ್ಮದಿಯಿಂದ ಬದುಕುತ್ತಿದ್ದೇವೆ. ಅಂತಹಾ ಸಂವಿಧಾನವನ್ನೇ ಬದಲಾಯಿಸುವ ಹುನ್ನಾರವಿದ್ದು, ಮನುವಾದಿಗಳಿಗಳಿಂದ ಸಂವಿಧಾನಕ್ಕೆ ಧಕ್ಕೆಯಾಗುವ ಸಾದ್ಯತೆಗಳಿವೆ. ಆ ನಿನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠಕಲಿಸಬೇಕಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.
ಅವರು ಭಾನುವಾರ ತೆಕ್ಕಟ್ಟೆಯ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಯುವ ಕಾಂಗ್ರೆಸ್ ಕುಂದಾಪುರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು..
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಮಾತನಾಡಿ, ಹಿಂದುತ್ವದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಮೊದಲು ಅವರ ಮನೆಯ ತುಳಸಿ ಕಟ್ಟೆಗೆ ದೀಪ ಹಚ್ಚುವ ಕೆಲಸ ಮಾಡಲಿ. ನಾವೂ ಹಿಂದೂಗಳೇ. ಆದರೆ ನಮ್ಮ ಮನೆಯಲ್ಲಿ ದೇವರ ಕೆಲಸ, ದೈವಗಳ ಆರಾಧನೆ ಹಿಂದಿನಿಂದಲೇಬನಡೆದುಕೊಂಡು ಬಂದಿದೆ. ಮೋದಿ ಸರ್ಕಾರದ ಜಿಎಸ್ಟಿ ನೀತಿಯಿಂದ ಸಂಭ್ರಮ ಕಡಿಮೆಯಾಗಿದೆ. ನಾವು ಹಿಂದುತ್ವ, ಸಂಪ್ರದಾಯಗಳ ಬಗ್ಗೆ ಬಿಜೆಪಿಯಿಂದ ಕಲಿಯಬೇಕಿಲ್ಲ. ಸುಳ್ಳು ಸರಳತೆಗಳಿಗೆ ಬಲಿಯಾಗಿ ಉತ್ತಮ ಸಂಸದೀಯ ಪಟುವನ್ನು ಕಳೆದುಕೊಳ್ಳಬೇಡಿ ಎಂದರು.
ದಿನೇಶ್ ಹೆಗ್ಡೆ ಮೊಳಹಳ್ಳಿ ಮಾತನಾಡಿ, ಜಯಪ್ರಕಾಶ್ ಹೆಗ್ಡೆಯಂತಹಾ ನಾಯಕತ್ವವನ್ನು ಕಳೆದುಕೊಳ್ಳದಂತೆ ಮತದಾರರು ಎಚ್ಚರವಹಿಸಬೇಕು ಎಂದರು.
ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಗಡೆ, ಕೆಪಿಸಿಸಿ(KPCC) ಉಪಾಧ್ಯಕ್ಷ ಎಮ್.ಎ.ಗಫೂರ್, ಕೆಪಿಸಿಸಿ(KPCC)ಕಾರ್ಯದರ್ಶಿ ನವೀನ್‌ಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಶಿವರಾಮ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಣಿ ಬೆಳ್ವೆ, ಕಾಂಗ್ರೆಸ್ ಮುಖಂಡ ಸದಾನಂದ ಶೆಟ್ಟಿ ಕೆದೂರು, ಯೂತ್ ಕಾಂಗ್ರೆಸ್ ಕೋಟ ಬ್ಲಾಕ್ ಅಧ್ಯಕ್ಷ ಸುನಿಲ್ ಮಡಿವಾಳ, ಕುಂದಾಪುರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುನಾಫ್ ಕೋಡಿ, ಕುಂದಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಅಭಿಜಿತ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಸಲಾಂ ತೆಕ್ಜಟ್ಟೆ ಕಾರ್ಯಕ್ರಮ ನಿರೂಪಿಸಿ, ದೀಪಕ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.











