ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ದ್ವಿಚಕ್ರ ವಾಹನ ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ ಮಂಗಳವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿ ಬಳ್ಕೂರು ಬಸವ ಪೂಜಾರಿ (55) ಎಂದು ಗುರುತಿಸಲಾಗಿದೆ.
ಕಂಡ್ಲೂರುನಿಂದ ಬಸ್ರೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಟಿಪ್ಪರ್ ಲಾರಿ ಬಸ್ರೂರುಯಿಂದ ಬಳ್ಕೂರು ಕಡೆಗೆ ಹೋಗುತ್ತಿದ್ದ ಟಿವಿಎಸ್ ವಾಹನಕ್ಕೆ ನೇರ ಡಿಕ್ಕಿ ಹೊಡೆದಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.











