ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಕೋಟದ ಸೇವಾಸಂಗಮ ಶಿಶುಮಂದಿರ ಇದರ ಶಾಲಾ ಪೂರ್ವತಯಾರಿಯ ಹಿನ್ನಲೆಯಲ್ಲಿ ಶಿಶುಮಂದಿದ ಸುತ್ತಮುತ್ತಲಿನ ಪ್ರಾಂಗಣ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
ಪಂಚವರ್ಣಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ ಸಹಯೋಗದೊಂದಿಗೆ 208ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕೋಟದ ಸೇವಾಸಂಗಮ ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯ ಡಾ. ವಾದಿರಾಜ್ ಚಾಲನೆ ನೀಡಿದರು.
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಹಂದಟ್ಟು ಮಹಿಳಾ ಬಳಗದ ಸ್ಥಾಪಕಾಧ್ಯಕ್ಷೆ ಪುಷ್ಭಾ ಕೆ ಹಂದಟ್ಟು , ಪಂಚವರ್ಣದ ಸಂಚಾಲಕ ಅಮೃತ್ ಜೋಗಿ ಮತ್ತಿತರರು ಇದ್ದರು.











