ಕುಂದಾಪುರ ಮಿರರ್ ಸುದ್ದಿ…
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಮತ್ತು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಇತ್ತೀಚಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜಯಕರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯು ಮಾಡುತ್ತಿರುವ ಸಾಮಾಜಿಕ ಸೇವೆಗಳ ಬಗ್ಗೆ ತಿಳಿಯ ಪಡಿಸಿ ರಕ್ತದಾನದ ಮಹತ್ವವನ್ನು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುನೀತ.ವಿ ವಿದ್ಯಾರ್ಥಿಗಳಿಗೆ ರಕ್ತದಾನದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಬಿಟ್ಟು ರಕ್ತದಾನ ಮಾಡಿ ಜೀವ ಉಳಿಸಿ ಇತರರನ್ನು ಪ್ರೇರೇಪಿಸಿ ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ರಾಜಣ್ಣ ಎಂ ಸಂಘಟಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಶಂಕರ ನಾಯ್ಕ ಬಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮುರಳಿ ಎಂ.ಜಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡು ರಕ್ತದಾನ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲೆ ಡಾ. ಸುನೀತಾ ಕೃತಜ್ಞತೆ ಸಲ್ಲಿಸಿದರು.











