ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇದೇ ಬರುವ ಜೂನ್ 11ನೆಯ ಮಂಗಳವಾರ ಸಾಲಿಗ್ರಾಮದ ಪಾರಂಪಳ್ಳಿಯ ಶ್ರೀ ವಿಷ್ಣುಮೂರ್ತಿ ಸಭಾಭವನದಲ್ಲಿ ನಡೆಯಲಿರುವ ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಪಾರಂಪಳ್ಳಿ ನರಸಿಂಹ ಐತಾಳರ ಮನೆಗೆ ತೆರಳಿದ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಐತಾಳ ದಂಪತಿಗಳನ್ನು ಗೌರವಿಸಿ ಸಮ್ಮೇಳನದ ಆಮಂತ್ರಣ ಪತ್ರವನ್ನು ನೀಡಿದರು. ಈ ಹೊಣೆಗಾರಿಕೆಯನ್ನು ಸ್ವೀಕರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಾಲಿಗ್ರಾಮ ಪ.ಪಂ ಸದಸ್ಯ ಅನುಸೂಯ ಹೇರ್ಳೆ, ಕಸಾಪ ಜಿಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್, ಸಾಹಿತ್ಯ ಪರಿಷತ್‍ನ ಪ್ರಮುಖರಾದ ಅಚ್ಯುತ್ ಪೂಜಾರಿ, ಶ್ರೀಪತಿ ಹೇರ್ಳೆ, ಉಪೇಂದ್ರ ಸೋಮಯಾಜಿ, ಸತೀಶ್ ವಡ್ಡರ್ಸೆ, ಹಿರಿಯ ಕೃಷಿಕರಾದ ಪಾರಂಪಳ್ಳಿ ರಘು ಮಧ್ಯಸ್ಥ ಮತ್ತಿತರರು ಇದ್ದರು.











