ಕುಂದಾಪುರ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ನಾನು 2012 ಮತ್ತು 2018ರಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದೇನೆ. ಈ ಬಾರಿ ನನ್ನ ಸ್ಪರ್ಧೆ ಪಕ್ಷದ ನಾಯಕರ ವಿರುದ್ಧವಲ್ಲ, ಪಕ್ಷಾಂತರಿಯ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ. ಜೂನ್ 3 ರಂದು ನಡೆಯುವ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತದಾನ ಪದ್ದತಿ ಇರುವುದರಿಂದ ಮತ ಹಾಕುವಾಗ ಮತಗಟ್ಟೆಯಲ್ಲಿ ಚುನಾವಣಾಧಿಕಾರಿಗಳು ನೀಡುವ ಪೆನ್ನಿನಿಂದಲೇ ಎಸ್.ಪಿ.ದಿನೇಶ್ ಹೆಸರಿನ ಮುಂದೆ ‘1’ ಎಂದು ಬರೆದು ಮತ ಚಲಾಯಿಸಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ ದಿನೇಶ್ ಹೇಳಿದರು.
ಅವರು ಕುಂದಾಪುರ ಪ್ರೆಸ್ ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಇದು ವಿಶಾಲವಾದ ಕ್ಷೇತ್ರವಾಗಿದ್ದು 30 ವಿಧಾನಸಭಾ ಕ್ಷೇತ್ರ, 6 ಲೋಕಸಭಾ ಕ್ಷೇತ್ರ, 6 ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಳೆದ ಎರಡು ಚುನಾವಣೆಯಲ್ಲಿ ಸ್ಫರ್ಧೆ ಮಾಡಿದ್ದು ಕ್ಷೇತ್ರದ ಮತದಾರರ ಪರಿಚಯ ಹೊಂದಿದ್ದೇನೆ. 10 ತಿಂಗಳ ಹಿಂದೆ ಪಕ್ಷದ ವರಿಷ್ಠರು ನನಗೆ ಟಿಕೆಟು ನೀಡುವುದಾಗಿ ತಿಳಿಸಿದ್ದರು. ಅಂತೆಯೇ ನಾನು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಕೊನೆಯ ಗಳಿಗೆಯಲ್ಲಿ ನನ್ನ ಹೆಸರನ್ನು ಕೈಬಿಟ್ಟು ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗೆ ಅವಕಾಶ ಕಲ್ಪಿಸಿದರು. ಸಂವಿಧಾನದ 4 ಮನೆ, 4 ಪಕ್ಷವನ್ನು ನೋಡಿರುವ ವ್ಯಕ್ತಿಗೆ ಈಗ ಪಕ್ಷ ಟಿಕೇಟು ನೀಡಲಾಗಿದೆ. ರಾಹುಲ್ ಗಾಂಧಿ, ಸಿದ್ಧರಾಮಯ್ಯ ಅವರಿಗೆ ನಿಂದಿಸಿರುವ ವ್ಯಕ್ತಿ ಕಾಂಗ್ರಸ್ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ಮುಜುಗರವಾಗುತ್ತದೆ ಎಂದರು.
ಈ ಸ್ಪರ್ಧೆ ಮಾಡುತ್ತಿರುವ ಮೂರು ವ್ಯಕ್ತಿಗಳು ಕೂಡಾ ಮೂರು ಜನ ಕೂಡಾ ಒಂದೇ ಮನೆಯಿಂದ ಬಂದವರು. ನಾನು ಮಾತ್ರ ಗಾಂಧಿ ಸಂಸ್ಕøತಿಯಿಂದ ಬಂದವನು. ಇದು ನನ್ನ ಮೂರನೇ ಸ್ಪರ್ಧೆ, ಕ್ಷೇತ್ರದ ಪದವೀಧರ ಮತದಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಇಲ್ಲಿ ನನಗೂ ಮತ್ತು ರಘುಪತಿ ಭಟ್ಟರ ನಡುವೆ ನೇರ ಸ್ಪರ್ಧೆ ನಡೆಯುತ್ತದೆ ಎಂದು ಅವರು ಹೇಳಿದರು.
ಸುದ್ಧಿಗೋಷ್ಠಿಯಲ್ಲಿ ಈಶ್ವರ, ಸಿದ್ಧು ಉಪಸ್ಥಿತರಿದ್ದರು.