ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾಟದಲ್ಲಿ ಅತಿಥೇಯ ಕೋಟ-ಪಡುಕರೆ ಪದವಿ ಕಾಲೇಜಿಗೆ ಪ್ರಥಮ ಸ್ಥಾನ

0
385

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ, ಇತ್ತೀಚಿಗೆ ಆಯೋಜಿಸಿದ್ದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಕ್ರಿಕೆಟ್ ಪಂದ್ಯಾಟವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿ ಕ್ರಿಕೆಟ್ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ವ್ಯಕ್ತಿತ್ವವನ್ನು ಬೆಳೆಸಲು ಸಹಾಯಕವಾಗುತ್ತದೆ ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಕೋಟ ಪೋಲಿಸ್ ಠಾಣೆಯ ಉಪ ನಿರೀಕ್ಷಕ ತೇಜಸ್ವಿ ಮಾತನಾಡಿ ವಿದ್ಯಾರ್ಥಿಗಳು ಪಠ್ಯದೊಂದಿಗೆ, ದೈಹಿಕ ಪಾಠವನ್ನು ತಿಳಿಸುವ ಪಂದ್ಯಾಟಗಳಲ್ಲಿ ಪಾಲ್ಗೊಂಡಾಗ ಜೀವನವನ್ನು ಯಶಸ್ಸುಗೊಳಿಸಲು ಸಾಧ್ಯವಿದೆ ಎಂದು ತಿಳಿಸಿದರು.

Click Here

ಸಮಾರೋಪ ಸಮಾರಂಭದಲ್ಲಿ ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್ ವಿಜೇತ ತಂಡಗಳಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುನೀತ ವಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ ಹಾಗೂ ಕಾರ್ಯದರ್ಶಿಗಳಾದ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.

ಈ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಅತಿಥೇಯ ಕಾಲೇಜು, ದ್ವಿತೀಯ ಸ್ಥಾನವನ್ನು ಎಸ್.ಎಮ್.ಎಸ್. ಕಾಲೇಜು ಬ್ರಹ್ಮಾವರ ಮತ್ತು ತೃತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಪಡೆದುಕೊಂಡಿದೆ. ಪಂದ್ಯಾಟದ ಸಂಘಟಕರು ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮನೋಜ ಕುಮಾರ್ ಎಂ ಸ್ವಾಗತಿಸಿ, ರಾಜಣ್ಣ ಎಂ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶಂಕರ ನಾಯ್ಕ ಬಿ. ವಂದಿಸಿದರು.

Click Here

LEAVE A REPLY

Please enter your comment!
Please enter your name here