ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸರಕಾರಿ ಶಾಲೆಯಲ್ಲಿ ಕಲಿತ ಎಸ್ಸೆಸ್ಸೆಲ್ಸಿ ಯಲ್ಲಿ 600ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರಥಮ 50 ವಿದ್ಯಾರ್ಥಿಗಳಿಗೆ ಎಂ.ಎಂ ಹೆಗ್ಡೆ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಶಿಕ್ಷಣ ನೀಡಲಾಗುವುದೆಂದು ಟ್ರಸ್ಟ್ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಹೇಳಿದರು.
ಅವರು ಬುಧವಾರದಂದು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ 2024-25 ನೇ ಸಾಲಿನ ಪಿ.ಸಿ.ಎಮ್.ಸಿ.(PCMC) ಮತ್ತು ಪಿ.ಸಿ.ಎಮ್.ಬಿ.(PCMB)ವಿಭಾಗದ ಸ್ಥಳೀಯ ವಿದ್ಯಾರ್ಥಿಗಳ ಪಾಲಕರ-ಶಿಕ್ಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಡಳಿತ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಮಾತನಾಡಿ ಶಿಕ್ಷಣ ಪ್ರಕ್ರಿಯೆ ಕೇವಲ ಶಿಕ್ಷಕ ಮತ್ತು ಮಕ್ಕಳನ್ನು ಮಾತ್ರ ಅವಲಂಭಿಸಿಲ್ಲ. ಅದಕ್ಕೆ ಪೂರಕವಾಗಿ ಪಾಲಕರ ಪಾತ್ರವು ಮುಖ್ಯವಾಗಿರುತ್ತದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಸಹಕಾರ ಅಗತ್ಯ ಎಂದರು. ನಮ್ಮ ವಿದ್ಯಾ ಸಂಸ್ಥೆ ವಿಧ್ಯಾರ್ಥಿಗಳ ಭವಿಷ್ಯ ರೂಪಿಸುವುದು ಧ್ಯೇಯವಾಗಿದೆ. ಉಪನ್ಯಾಸಕರ ಅವಿರತ ಶ್ರಮ, ಆಡಳಿತ ಮಂಡಳಿಯ ಸಹಕಾರದಿಂದ ಎಕ್ಸಲೆಂಟ್ ವಿದ್ಯಾಸಂಸ್ಥೆ ಅತ್ಯುತ್ತಮ ಫಲಿತಾಂಶಗಳಿಸಲು ಸಾಧ್ಯ ಎಂದರು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚಿನ ಒತ್ತನ್ನು ಕೊಡುತ್ತೇವೆ. ಮೊಬೈಲ್ ನಿಂದ ಮಕ್ಕಳನ್ನು ದೂರವಿಟ್ಟು ಮಕ್ಕಳ ವಿದ್ಯೆಗೆ ಗಮನ ನೀಡಬೇಕೆಂದು ಪಾಲಕರಿಗೆ ಮನವಿ ಮಾಡಲಾಯಿತು
ವಿಜ್ಜಾನ ವಿಭಾಗದ ಮುಖ್ಯಸ್ಥರಾಗಿರುವ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ರಜಿನಿ, ರಸಾಯನಶಾಸ್ತ್ರದ ಮುಖ್ಯಸ್ಥ ಹರಿ ಶರ್ಮ, ಜೀವಶಾಸ್ತ್ರದ ವಿಭಾಗದ ಮುಖ್ಯಸ್ಥೆ ಸ್ಮೀತ್ಥಲ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಝಹಿರ್ ಅಬ್ಬಾಸ್ ಇವರುಗಳು ವಿದ್ಯಾರ್ಥಿಗಳ ಯಶಸ್ವಿಗೆ ಮುನ್ನುಡಿಯಾಗಿ ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯ ವಿಷಯಗಳ ಬಗ್ಗೆ ತಮ್ಮ ಯೋಜನೆ, ಯೋಚನೆಗಳನ್ನು ಪಾಲಕರಿಗೆ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರು, ವಿದ್ಯಾರ್ಥಿಗಳು, ಪೋಷಕರು ಭಾಗಿಯಾಗಿದ್ದರು.
ಅಧ್ಯಾಪಕ ಶ್ರೀನಿವಾಸ ವೈದ್ಯ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.











