ಕುಂದಾಪುರ :ನಾಳೆ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

0
154

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ ಶುಕ್ರವಾರ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ರಜೆ ಘೋಷಿಸಿ ಆದೇಶಿಸಿದ್ದಾರೆ.

Click Here

ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿಲ್ಲ. ಆದರೆ ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ, ಗಮನವಹಿಸಬೇಕು. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಬೇಕು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ, ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಇನ್ನು ಮಳೆಗಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಬೇಕು. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Click Here

LEAVE A REPLY

Please enter your comment!
Please enter your name here