ನಾವುಂದ :ನೆರೆಪೀಡಿತ ಪ್ರದೇಶಗಳಿಗೆ ಶಾಸಕ ಗಂಟಿಹೊಳೆ ಭೇಟಿ

0
118

Click Here

Click Here

ಕುಂದಾಪುರ ಮಿರರ್ ಸುದ್ದಿ…

ಬೈಂದೂರು :ಉಡುಪಿ ಜಿಲ್ಲೆಯ ವಿವಿಧ ಭಾಗಗಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಬೈಂದೂರು ತಾಲೂಕಿನಲ್ಲೂ ವರುಣದೇವ ಅಬ್ಬರಿಸುತ್ತಿದ್ದಾನೆ. ಎಡೆಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೈಂದೂರು ತಾಲೂಕಿನ ವಿವಿಧ ಕಡೆ ನೆರೆ ಪ್ರವಾಹ ಮಳೆ ಹಾನಿ ಘಟನೆಗಳು ವರದಿಯಾಗಿದೆ.

Click Here

ಬೈಂದೂರು ತಾಲ್ಲೂಕಿನ ವಿವಿಧೆಡೆಯ ಮಳೆಹಾನಿ ಸುದ್ದಿಯ ಬೆನ್ನಲ್ಲೇ ನೆರೆಪೀಡಿತ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿದರು. ಬೈಂದೂರು ತಾಲ್ಲೂಕಿನ ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ ಕುಸಿತ ಉಂಟಾಗಿದ್ದು, ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಜನರ ರಕ್ಷಣೆ, ಸ್ಥಳಾಂತರ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ಚಿಂತನೆ ನಡೆಸಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಕ್ಕೆ ಅಗತ್ಯ ಸೂಚನೆ ನೀಡಿದರು.

ಎಡೆಬಿಡದೆ ಸುರಿಯುತ್ತಿರುವ ಮಳೆಯು ಇನ್ನಷ್ಟು ಅಪಾಯ ತಂದೊಡ್ಡುವ ಭೀತಿ ಇದ್ದು, ಕ್ಷೇತ್ರದ ಜನರು ಸಂಭಾವ್ಯ ಅಪಾಯಗಳ ಬಗ್ಗೆ ಜಾಗರೂಕರಾಗಿರಬೇಕೆಂದು ತಾಲ್ಲೂಕಿನ ಜನತೆಗೆ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮನವಿ ಮಾಡಿದ್ದಾರೆ.

Click Here

LEAVE A REPLY

Please enter your comment!
Please enter your name here