ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಶ್ರೀಮಾತಾ ಅಸ್ಪತ್ರೆ ಮಾಲಕ ಡಾ.ಸತೀಶ ಪೂಜಾರಿ (54) ಅವರು ಇಂದು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ತಮ್ಮ ವಿಭಿನ್ನ ಶೈಲಿಯ ಹಾಡುಗಾರಿಕೆಯ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದ ವೈದ್ಯರು. ಸಾಂಸ್ಕೃತಿಕ ಮತ್ತು ಸಂಗೀತ ಕಾರ್ಯಕ್ರಮಗಳಿಗೆ ಸದಾ ಕಾಲ ಪ್ರೋತ್ಸಾಹ ನೀಡುತ್ತಿದ್ದ ಡಾ. ಸತೀಶ್ ಪೂಜಾರಿ. ಫಿಟ್ನೆಸ್ ಕುರಿತು ಅತಿ ಹೆಚ್ಚು ಒಲವು ಹೊಂದಿದ್ದರು.
ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.











