ಕೋಟ :ಆಸಾಡಿ ಒಡ್ರ್ ಆಮಂತ್ರಣ ಬಿಡುಗಡೆ – ಗ್ರಾಮೀಣ ಭಾಷೆ ಉಳಿಸುವ ಮಹತ್ಕಾರ್ಯ – ಜಿ.ತಿಮ್ಮ ಪೂಜಾರಿ

0
231

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕುಂದಾಪ್ರ ಭಾಷೆ ವಿಶಿಷ್ಟವಾದದ್ದು ಇದರ ಎಲ್ಲಾ ಆಯಾಮಗಳನ್ನು ಉಳಿಸುವ ಉದ್ದೇಶದಿಂದ ಆಸಾಡಿ ಒಡ್ರ್ ಕಾರ್ಯಕ್ರಮ ಆಯೋಜಿಸುತ್ತಿರುವುದು ಮಹತ್ಕಾರ್ಯವಾಗಿದೆ ಎಂದು ಸಹಕಾರಿ ಧುರೀಣ ಜಿ.ತಿಮ್ಮ ಪೂಜಾರಿ ನುಡಿದರು.

ಭಾನುವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕದ ಸಹಕಾರದೊಂದಿಗೆ ಇದೇ ಅಗಸ್ಟ್ 11ರಂದು ಹಂದಟ್ಟು ಪರಿಸರದಲ್ಲಿ ನಡೆಯಲಿರುವ ಆಸಾಡಿ ಒಡ್ರ್ ಊರ್ ಕೇರಿ ಬದ್ಕ್ ಎಂಬ ಶೀರ್ಷಿಕೆಯಡಿ ನಡೆಯಲಿರು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಗ್ರಾಮೀಣ ಭಾಷೆ, ಅಲ್ಲಿನ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಅಥವಾ ಮುಂದಿನ ತಲೆಮಾರಿಗೆ ಕೊಂಡ್ಯೋಯುವ ಕಾರ್ಯ ಮಾಡಬೇಕಿದ್ದು ಅದರಂತೆ ಆಸಾಡಿ ಒಡ್ರ್ ಅರ್ಥಪೂರ್ಣ ಕಾರ್ಯಕ್ರಮವಾಗಿಸುತ್ತಿರುವುದು ಗಮನಕ್ಕೆ ಬಂದಿದೆ ಇಂತಹ ಕಾರ್ಯಕ್ರಮಗಳು ಎಲ್ಲಾ ಭಾಗಗಳಲ್ಲಿ ಪಸರಿಸಲಿ ಎಂದು ಹಾರೈಸಿದರು.

ಸಾಹಿತಿ ನರೇಂದ್ರ ಕುಮಾರ್ ಕೋಟ ಕುಂದಾಪುರ ಭಾಷೆ ಅದರ ಬದುಕಿನ ಆಯಾಮಗಳನ್ನು ಸಭೆಯಲ್ಲಿ ತಿಳಿಸಿದರು.

Click Here

ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕನ್ನಡ ಸಾಹಿತ್ಯ ಪರಿಷತ್ತ್ ಬ್ರಹ್ಮಾವರ ತಾಲೂಕು ಅಧ್ಯಕ್ಷ ಜಿ.ರಾಮಚಂದ್ರ ಐತಾಳ್ ,ನಿರೂಪಕ ಅವಿನಾಶ್ ಕಾಮತ್, ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ಬಾಲಕೃಷ್ಣ ನಕ್ಷತ್ರಿ,ಸಂಜೀವ ಗುಂಡ್ಮಿ, ಪಾಂಚಜನ್ಯ ಸಂಘ ಪಾರಂಪಳ್ಳಿ ಹಂದಟ್ಟು ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ , ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿದರು.ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Click Here

LEAVE A REPLY

Please enter your comment!
Please enter your name here