ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

0
222

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ರೋಟರಿ ಕ್ಲಬ್ ಕೋಟೇಶ್ವರ, ರಕ್ತನಿಧಿ ಕೆ.ಎಂ.ಸಿ ಮಣಿಪಾಲ, ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆಯಿತು.

ಸಭಾಧ್ಯಕ್ಷತೆಯನ್ನು ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ನಾಗರಾಜ ಬೀಜಾಡಿ ವಹಿಸಿದ್ದರು.

Click Here

ಕಾರ್ಯಕ್ರಮವನ್ನು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್‍ನ ಅಧ್ಯಕ್ಷ ಸತೀಶ್.ಎಂ ನಾಯ್ಕ್ ,ಮೊಗವೀರ ಸಮುದಾಯದ ಬಗ್ವಾಡಿ ಹೋಬಳಿ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ನಿಕಟಪೂರ್ವ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ರಕ್ತ ನಿಧಿ ಮಣಿಪಾಲದ ಡಾ.ಬಿಸ್ಮಿತಾ, ಸಂಘಟನೆಯ ಗೌರವಾಧ್ಯಕ್ಷ ಸುರೇಶ್ ಮೊಗವೀರ ಶಾನಾಡಿ, ಮಹಿಳಾ ಘಟಕದ ಅಧ್ಯಕ್ಷ ಉಷಾ ಬಂಗೇರ ಮಾರ್ಕೋಡು, ಸಂಘಟನೆಯ ಪ್ರಮುಖರಾದ ಚಂದ್ರ ಬಂಗೇರ, ರೋಟರಿ ಕ್ಲಬ್ ಕೋಟೇಶ್ವರ ಕಾರ್ಯದರ್ಶಿ ಸುಭಾಶ್ ಚಂದ್ರ ಶೆಟ್ಟಿ, ಜಿಲ್ಲಾ ಸಂಘಟನೆ ಪ್ರಧಾನ ಕಾರ್ಯದರ್ಶಿ ರವೀಂದ್ರ ಪುತ್ರನ್ ಉಪಸ್ಥಿತರಿದ್ದರು.

ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷ ಸುನೀಲ್ ಜಿ ನಾಯ್ಕ್ ಸ್ವಾಗತಿಸಿದರು, ಕಾರ್ಯದರ್ಶಿ ರಾಘವೇಂದ್ರ ಹಳೆಅಳಿವೆ ವಂದಿಸಿದರು. ಕಾರ್ಯಕ್ರಮವನ್ನು ಅಶೋಕ ತೆಕ್ಕಟ್ಟೆ ನಿರ್ವಹಿಸಿದರು. ಒಟ್ಟು155 ಯುನಿಟ್ ರಕ್ತ ಸಂಗ್ರಹಿಸಲಾಯಿತು.

Click Here

LEAVE A REPLY

Please enter your comment!
Please enter your name here