ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಅಧೀನಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ಪರಿಸರಸ್ನೇಹಿ ೧೧ನೇ ಸರಣಿ ಪರಿಸರ ಮಾಹಿತಿ ಕಾರ್ಯಾಗಾರ ಮಾಲಿಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಮುಕ್ತ ಹಾಗೂ ಹಸಿರು ಕ್ರಾಂತಿ ಸೃಷ್ಟಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತಂತೆ ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಾಹಿತಿ ಕಾರ್ಯಾಗಾರ ಜು..27ರ ಪೂ.10ಗ. ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಪರಿಸರ ಪ್ರೇಮಿ,ಸಮಾಜಸೇವಕ ವಿನಯಚಂದ್ರ ಸಾಸ್ತಾನ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಹಾಗೂ ಅಧ್ಯಕ್ಷ ಅಜಿತ ಆಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ











