ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಜು. 27 ರಂದು ಬೆಳಗ್ಗೆ 11 ಗಂಟೆಗೆ ಕುಂದಾಪುರದ ಜೆಎಲ್‌ಬಿ ರಸ್ತೆಯ ಜೆಸಿ ಭವನದಲ್ಲಿ ನಡೆಯಲಿದೆ.
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಅವರಿಗೆ ಪತ್ರಿಕಾ ದಿನದ ಗೌರವಾರ್ಪಣೆ ನಡೆಯಲಿದೆ.
ಸಾಹಿತಿ, ಅಂಕಣಕಾರ, ನಟ, ಜಾದೂಗಾರ ಓಂ ಗಣೇಶ್ ಉಪ್ಪುಂದ, ಕುಂದಾಪುರ ಹಂಗಳೂರಿನ ಸೂಪರ್ ಗ್ರೇಡ್ ವಿದ್ಯುತ್ ಗುತ್ತಿಗೆದಾರ ಕೆ.ಆರ್. ನಾಯ್ಕ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಉಪಾಧ್ಯಕ್ಷ ವಿನಯ ಪಾಯಸ್, ಕುಂದಾಪುರ ಅಂಚೆ ಇಲಾಖೆಯ ಎಎಸ್‌ಪಿ ಸತೀಶ್, ಕುಂದಾಪುರ ತಾಲೂಕು ಸಂಘದ ಪ್ರಧಾನ ಕಾರ್‍ಯದರ್ಶಿ ಗಣೇಶ್ ಎಸ್. ಬೀಜಾಡಿ, ಕೋಶಾಧಿಕಾರಿ ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ ಮೊದಲಾದವರು ಭಾಗವಹಿಸಲಿದ್ದಾರೆ.
ಇದೇ ವೇಳೆ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಇದಕ್ಕೂ ಮೊದಲು ಬೆಳಗ್ಗೆ 9 ಗಂಟೆಯಿಂದ ಭಾರತೀಯ ಅಂಚೆ ಇಲಾಖೆ ಕುಂದಾಪುರ ವಿಭಾಗದ ವತಿಯಿಂದ ಸಮಗ್ರ ರಕ್ಷಣಾ ಯೋಜನೆಯಡಿ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಅಪಘಾತ ವಿಮೆ, ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಮತ್ತು ಪ್ರಧಾನ ಕಾರ್‍ಯದರ್ಶಿ ಗಣೇಶ್ ಬೀಜಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.











