ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಜನತಾ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.
ಭಾರತೀಯ ಸೇನೆಯ ನಿವೃತ್ತ ಜೂನಿಯರ್ ಕಮಿಷನ್ಡ್ ಅಧಿಕಾರಿ ಜೋಷಿ ಪಿ.ಪಿ. ಹುತಾತ್ಮ ಸೈನಿಕರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಸೈನಿಕರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು. ಕಾರ್ಗಿಲ್ ಯುದ್ಧದ ಕುರಿತಾಗಿ ಸ್ವ ಅನುಭವಗಳನ್ನು ಹಂಚಿಕೊಂಡರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ಮಾತನಾಡಿ ರಾಷ್ಟ್ರ ಭಕ್ತಿಯನ್ನು ಬೆಳೆಸಿಕೊಳ್ಳಿ ಸೈನಿಕರು ಹಾಗೂ ರೈತರು ನಮ್ಮ ದೇಶದ ರಿಯಲ್ ಹೀರೊಗಳೆಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕರಾದ ಅಭಿಜಿತ್ ಸ್ವಾಗತಿಸಿ, ಹರ್ಷ ಶೆಟ್ಟಿ ವಂದಿಸಿದರು.











