ಕುಂದಾಪುರ ಎಕ್ಸಲೆಂಟ್ ಪಿಯು ಕಾಲೇಜನಲ್ಲಿ ನೀಟ್, ಜೆಇಇ, ಸಿಇಟಿ ಹಾಗೂ ದ್ವಿತೀಯ ಪಿಯುಸಿ ಇಲಾಖಾ ಪರೀಕ್ಷೆಯಲ್ಲಿ ರ‍್ಯಾಂಕ್ ವಿಜೇತ 37 ವಿದ್ಯಾರ್ಥಿಗಳಿಗೆ ಸನ್ಮಾನ

0
1021

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸುಣ್ಣಾರಿಯ ಎಕ್ಸಲೆಂಟ್ ಕಾಲೇಜ್ ನಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಇಲಾಖಾ ಪರೀಕ್ಷೆಯಲ್ಲಿ ರ‍್ಯಾಂಕ್ ವಿಜೇತ 37 ವಿಧ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯಾದ ಎಂ.ಎಂ.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ ಕೇವಲ ಇಂಜಿನಿಯರ್ ಡಾಕ್ಟರ್ ಮಾತ್ರವಲ್ಲದೆ ಬೇರೆ ಬೇರೆ ಸಾವಿರಾರು ಉದ್ಯೋಗ ಅವಕಾಶಗಳು ಇವತ್ತು ತೆರೆದುಕೊಂಡಿದೆ. ಅದನ್ನು ಸುಧುಪಯೋಗಪಡಿಸಿಕೊಳ್ಳಬೇಕು ಇವತ್ತಿನ ಯುವ ಜನತೆಯಲ್ಲಿ ಮಾನಸಿಕ ನೆಮ್ಮದಿ ಹದಗೆಡುತ್ತಿದೆ. ಹಾಗೆ ನಾವು ಕಲಿತ ಶಾಲೆ ನಮ್ಮ ತಂದೆ ತಾಯಿ ಮತ್ತು ನಮ್ಮ ಊರನ್ನು ಮರೆಯಬಾರದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಮಾತನಾಡಿ ಎಕ್ಸಲೆಂಟ್ ಸಂಸ್ಥೆ ಆರಂಭದಿಂದ ಇಲ್ಲಿಯವರೆಗೆ ಅನೇಕ ರ‍್ಯಾಂಕ್ ನಮ್ಮ ಸಂಸ್ಥೆಗೆ ಬಂದಿದ್ದು, ಇವತ್ತಿನ ಕಾಲಮಟ್ಟಕ್ಕೆ ಸರಿಸಮನಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳಿಗೆ ನಡೆಸುತ್ತಾ ಬಂದಿದ್ದೇವೆ. ಅದರ ಫಲವಾಗಿ ಸುಣ್ಣಾರಿ ಎಕ್ಸಲೆಂಟ್ ಸಂಸ್ಥೆ 37 ರ್ಯಾಂಕ್ ಗಳನ್ನು ತನ್ನ ಮುಡಿಗೇರಿಸಿಕೊಂಡಿದೆ ಎಂದರು.

Click Here

ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಸರೋಜಿನಿ ಪಿ. ಅಚಾರ್ಯ ರ‍್ಯಾಂಕ್ ವಿಜೇತರಿಗೆ ಶುಭಕಾಮನೆ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಂ. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಹಾಗೂ ಎಕ್ಸಲೆಂಟ್ ಪಿಯು ಕಾಲೇಜಿನ ಅಧ್ಯಕ್ಷ ಎಂ. ಮಹೇಶ ಹೆಗ್ಡೆಯವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ನಾನು ಕಟ್ಟಿ ಬೆಳೆಸಿದಂತ ಈ ವಿದ್ಯಾ ಸಂಸ್ಥೆ ಕಾಲಕ್ಕೆ ಯಾವೆಲ್ಲ ರೀತಿಯ ಶೈಕ್ಷಣಿಕ ಪರಿವರ್ತನೆ ಆಗಬೇಕು ಅದಕ್ಕೆ ಅನುಗುಣವಾಗಿ ಉತ್ತಮ ಉಪನ್ಯಾಸಕರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ. ಇವತ್ತು ಜೆಇಇ ಅಡ್ವಾನ್ಸ್ ಅಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ನಾವು ಪಡೆದುಕೊಂಡಿದ್ದೇವೆ ಎಂದು ಹೇಳಲು ಹೆಮ್ಮೆ ಪಡುತ್ತಿದ್ದೇನೆ ಎಂದರು.

ರಾಸಾಯನಶಾಸ್ತ್ರದ ಉಪನ್ಯಾಸಕಿಯಾದ ಚರಿಷ್ಮಾ ಸ್ವಾಗತಿಸಿ, ರ‍್ಯಾಂಕ್ ವಿಜೇತರ ಪಟ್ಟಿಯನ್ನು ಭೌತಶಾಸ್ತ್ರದ ಉಪನ್ಯಾಸಕಿ ವಿದ್ಯಾ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ದಿವ್ಯ ಶೆಟ್ಟಿ ವಾಚಿಸಿದರು. ಉಪನ್ಯಾಸಕರಾದ ಶ್ರೀನಿವಾಸ್ ವೈದ್ಯ ಅವರು ಕಾರ್ಯಕ್ರಮ ನಿರೂಪಿಸಿ ಆಂಗ್ಲ ಭಾಷೆ ಉಪನ್ಯಾಸಕಿ ಸುರೇಖಾ ಆಚಾರ್ಯ ವಂದಿಸಿದರು.

Click Here

LEAVE A REPLY

Please enter your comment!
Please enter your name here