ಉಡುಪಿ(ಕಲ್ಮಾಡಿ) :ಆ. 15ರಂದು ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

0
162

Click Here

Click Here

ಕುಂದಾಪುರ ಮಿರರ್ ಸುದ್ದಿ…

ಉಡುಪಿ :ಸ್ಟೆಲ್ಲಾ ಮಾರಿಸ್‌ ದೇವಾಲಯ ಕಲ್ಮಾಡಿ ಇಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವನ್ನು 15 ಅಗಸ್ಟ್‌ 2022 ರಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್‌ ಐಸಾಕ್‌ ಲೋಲೋರವರು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವಾಗಿ ಘೋಷಿಸಿದರು.

ಪ್ರತಿ ವರ್ಷದಂತೆ ಈ ಬಾರಿ ಕೂಡ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು 15 ಅಗಸ್ಟ್‌ 2024 ಗುರುವಾರದಂದು ನಡೆಯಲಿರುವುದು.

ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನವೇನಾ ಪ್ರಾರ್ಥನೆಗಳು ದಿ. ಆ.6 ರಿಂದ ಆ.14ರ ವರೆಗೆ ಸಾಯಂಕಾಲ 4:00 ಗಂಟೆಗೆ ನಡೆಯಲಿರುವುದು.

Click Here

ದಿ.ಆ.6 ಮಂಗಳವಾರದಂದು ಸಾಯಂಕಾಲ 3:45 ಗಂಟೆಗೆ ಮಂಗಳೂರು ಧರ್ಮಪ್ರಾಂತ್ಯದ ವಿಕಾರ್‌ ಜೆರಾಲ್‌ ಆಗಿರುವ ಮೊನ್ಸಿ. ಲಾರೆನ್ಸ್‌ ಮ್ಯಾಕ್ಸಿಮ್‌ ನೊರೋನ್ಹಾ ರವರು ಪುಣ್ಯಕ್ಷೇತ್ರದ ಬಾವುಟವನ್ನು ಹಾರಿಸುವ ಮೂಲಕ ನವೇನಾ ಪ್ರಾರ್ಥನೆಗಳಿಗೆ ಚಾಲನೆ ನೀಡಲಿರುವರು.

ದಿ. 11-08-2024 ಭಾನುವಾರದಂದು ಮಧ್ಯಾಹ್ನ 2:30 ಗಂಟೆಗೆ ಕಲ್ಮಾಡಿ ಸೇತುವೆಯಿಂದ ಕಲ್ಮಾಡಿ ದೇವಾಲಯದ ವರೆಗೆ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ನಡೆಯಲಿರುವುದು. ಅಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾಗಿರುವ ಅತೀ ವಂದನೀಯ ಡಾ. ಲುವಿಸ್‌ ಪಾವ್ಲ್‌ ಡಿʼಸೋಜಾ ರವರು ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಚಾಲನೆ ನೀಡಲಿರುವರು.

15 ಅಗಸ್ಟ್‌ 2024 ಗುರುವಾರ ದಂದು ಬೆಳಗ್ಗೆ 10:30 ಗಂಟೆಗೆ ದಿವ್ಯ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್‌ ಐಸಾಕ್‌ ಲೋಲೋ ರವರು ನೆರೆವೇರಿಸಲಿರುವರು. ಉಡುಪಿ ಧರ್ಮಪ್ರಾಂತ್ಯದ ಅನೇಕ ಧರ್ಮಗುರುಗಳು ಹಾಗೂ ಸಾವಿರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು. ಅಂದು ಬೆಳಗ್ಗೆ 7:30 ಹಾಗೂ ಸಾಯಂಕಾಲ 4:00 ಗಂಟೆಗೆ ಕೊಂಕಣಿ ಭಾಷೆಯಲ್ಲಿ ಹಾಗೂ ಸಾಯಂಕಾಲ 6:00 ಗಂಟೆಗೆ ಇಂಗ್ಲೀಷ್ ಭಾಷೆಯಲ್ಲಿ ಇತರೆ ಬಲಿಪೂಜೆಗಳನ್ನು ಆಯೋಜಿಸಲಾಗಿದೆ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರ ರೆಕ್ಟರ್‌ ಬ್ಯಾಪ್ಟಿಸ್ಟ್‌ ಮಿನೇಜಸ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Click Here

LEAVE A REPLY

Please enter your comment!
Please enter your name here