ಗಂಗೊಳ್ಳಿ: ಎಸ್.ವಿ.ವಿಯಲ್ಲಿ ಪೋಷಕರ ಸಭೆ

0
154

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಪಾಠೇತರ ಚಟುವಟಿಕೆಗಳಿಗೂ ಹೆಚ್ಚಿನ ಅವಕಾಶ ನೀಡಲಾಗುತ್ತಿದ್ದು, ಕಳೆದ ವರ್ಷ ಅನೇಕ ವಿದ್ಯಾರ್ಥಿಗಳು ರಾಜ್ಯ ಮಟ್ಟವನ್ನು ಪ್ರತಿನಿಧಿಸಿದ್ದಾರೆ. ಸರಕಾರದ ಮಾನದಂಡ ಹಾಗೂ ಮಾರ್ಗಸೂಚಿಯಂತೆ ಮಕ್ಕಳ ಕಲಿಕಾ ಅಭಿವೃದ್ಧಿಗೆ ಶಾಲೆಯ ಆಡಳಿತ ಮಂಡಳಿ ಶ್ರಮಿಸುತ್ತಿದ್ದು, ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಬೆನ್ನೆಲುಬಾಗಿ ನಿಂತು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್.ಸದಾಶಿವ ನಾಯಕ್ ಹೇಳಿದರು.

ಗಂಗೊಳ್ಳಿಯ ಸ.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಸಾಲಿನ ಶಿಕ್ಷಕ-ರಕ್ಷಕ ಸಮಿತಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Click Here

ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಕಾರ್ಯದರ್ಶಿ ಗೀತಾ ನಾಯಕ್ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ ಅವರು ಶಾಲೆಯ ನಿಯಮಗಳು ಹಾಗೂ ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿದರು.

ಸಹಶಿಕ್ಷಕಿ ದಿವ್ಯಶ್ರೀ ಆಚಾರ್ಯ ಸ್ವಾಗತಿಸಿದರು. ಸಮಿತಿಯ ಉಪಾಧ್ಯಕ್ಷ ಜಿ.ವಿಠಲ ಭಾಸ್ಕರ ಶೆಣೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಸುಜಾತ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಲಕ್ಷ್ಮೀ ವಂದಿಸಿದರು.

Click Here

LEAVE A REPLY

Please enter your comment!
Please enter your name here