ತಲ್ಲೂರು: ಪ್ರವಾಸಿ ಬಳಿ ಖಾಸಗಿ ಬಸ್ ಗೆ ಹಿಂದಿನಿಂದ ಲಾರಿ ಡಿಕ್ಕಿ : ವಿದ್ಯಾರ್ಥಿ ಗಂಭೀರ, 12 ಜನರಿಗೆ ಗಾಯ

0
435

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬೈಂದೂರುನಿಂದ ಕುಂದಾಪುರದತ್ತ ಸಾಗುತ್ತಿದ್ದ ಎಕೆಎಂಎಸ್ ಖಾಸಗೀ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ.

Click Here

ಅಪಘಾತದ ಪರಿಣಾಮ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನುಳಿದಂತೆ ಅದೇ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಪೂಜಾರಿ, ದೀಪಶ್ರೀ, ತನುಷ್, ಪ್ರೀತಮ್, ಕೋಟ ಆಶ್ರಿತಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರಾದ ಅಶ್ಮಿತಾ ಹಾಗೂ ಅಶ್ವಿನಿ, ಇತರ ಪ್ತಯಾಣಿಕರಾದ ಶಿವರಾಂ, ವಿದ್ಯಾ, ಸತೀಶ್, ದೀಪ ಹಾಗೂ ಸುಕ್ರ ಎಂಬುವರು ಸಣ್ಣ ಪುಟ್ಟ ಗಾಯಗಳಾಗಿದ್ದು ಕುಂದಾಪುರ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎ.ಕೆ.ಎಂ.ಎಸ್ ಬಸ್ಸಿನ ಚಾಲಕ ತಲ್ಲೂರು ಸಮೀಪದ ಪ್ರವಾಸಿ ಪೆಟ್ರೋಲ್ ಬಂಕ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ತಯಾಣಿಕರೊಬ್ಬರನ್ನು ಹತ್ತಿಸಿಕೊಳ್ಳಲು ಬಸ್ ನಿಲ್ಲಿಸಿದ್ದಾನೆ. ಪ್ರಯಾಣಿಕ ಬಸ್ಸೇರಿದ ಕೂಡಲೇ ಯಾವುದೇ ಮುನ್ಸೂಚನೆ ನೀಡದೇ ಬಸ್ಸನ್ನು ಚಲಾಯಿಸಿದ್ದಾನೆ. ಇದೇ ಸಂದರ್ಭ ಹಿಂದುಗಡೆಯಿಂದ ಸರಕು ತುಂಬಿಸಿಕೊಂಡು ಬರುತ್ತಿದ್ದ ಲಾರಿ ಚಾಲಕ ಬ್ರೇಕ್ ಹಾಕಿದ್ದರೂ ಫಲ ನೀಡದೇ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click Here

LEAVE A REPLY

Please enter your comment!
Please enter your name here