ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ, ಎಂ.ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರೆವೇರಿತು. .
ಸಂಸ್ಥೆಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನಡೆಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಕುಂದಾಪುರ ಇದರ ಅಧ್ಯಕ್ಷರಾದ ಎಂ.ಮಹೇಶ್ ಹೆಗ್ಡೆ ವಹಿಸಿದ್ದರು.
ಕುಂದಾಪುರ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಪ್ರಕಾಶ್‍ಚಂದ್ರ ಶೆಟ್ಟಿ ಚಿತ್ತೂರು ಪ್ರಾಸ್ತಾವಿಕ ಮಾತನಾಡಿ ರೋಟರಿ ಕ್ಲಬ್ ಬೆಳೆದು ಬಂದ ಹಾದಿ ಹಾಗೂ ಅದರ ಧ್ಯೇಯೋದ್ದೇಶಗಳನ್ನು ತಿಳಿಯಪಡಿಸಿದರು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ಲಿಯಾಕತ್ ಅಲಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ಸಲಹೆ ನೀಡಿದರು.
ನಂತರ ಮಾತನಾಡಿದ ಕುಂದಾಪುರದ ತೋಟಗಾರಿಕೆಯ ಇಲಾಖೆಯ ಟೆಕ್ನಿಕಲ್ ಆಫೀಸರ್ ಸಂತೋಷ್ ಹುಲ್ಲೂರ್ ನೆಮ್ಮದಿಯ ಜೀವನಕ್ಕೆ ಗಿಡ-ಮರಗಳ ಮಹತ್ವವನ್ನು ತಿಳಿಯಪಡಿಸುತ್ತಾ, ಅವುಗಳ ಬಗ್ಗೆ ಕಾಳಜಿವಹಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ರೋಟರಿ ಕ್ಲಬ್ ವಲಯ ಸೇನಾನಿ ವೆಂಕಟೇಶ ನಾವುಂದ, ಎಕ್ಸಲೆಂಟ್ ಪ.ಪೂ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ, ಎಕ್ಸಲೆಂಟ್ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಸರೋಜಿನಿ ಆಚಾರ್ಯ ಉಪಸ್ಥಿತರಿದ್ದರು.
ಎಕ್ಸಲೆಂಟ್ ಪ್ರೌಢಶಾಲಾ ಶಿಕ್ಷಕ ಸಂದೀಪ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.











