ಕೋಟ ಪಂಚವರ್ಣದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ

0
278

Click Here

Click Here

ಪ್ರತಿಯೊಬ್ಬರಲ್ಲೂ ದೇಶಾಭಿಮಾನದ ಬೀಜ ಬಿತ್ತಿ – ನಿವೃತ್ತ ಯೋಧ ಯೋಗೀಶ್ ಕಾಂಚನ್

ಕುಂದಾಪುರ ಮಿರರ್ ಸುದ್ದಿ…
ಕೋಟ: ದೇಶ ಕಾಯುವ ಕಾಯಕ ಶ್ರೇಷ್ಠವಾದದ್ದು ಅದರ ಬಗ್ಗೆ ತಪ್ಪು ಕಲ್ಪನೆ ಸಲ್ಲ ಎಂದು ನಿವೃತ್ತ ಯೋಧ ಮಣೂರು ಪಡುಕರೆಯ ಯೋಗೀಶ್ ಕಾಂಚನ್ ಹೇಳಿದರು.

ಗುರುವಾರ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿ ಸೇನೆಯಲ್ಲಿ ತಮ್ಮ ಮಕ್ಕಳನ್ನು ಸೇರಿಸುವ ಬಗ್ಗೆ ಕೆಲ ತಾಯಂದಿರರಿಗೆ ಗೊಂದಲ ಮೂಡಿದೆ ಸೇನೆಗೆ ಸೇರುವವರು ಸಾಯುವುದಕ್ಕೆ ಎಂಬ ತಪ್ಪು ಕಲ್ಪನೆಯನ್ನು ಹೊರದಬ್ಬಿ ದೇಶಾಭಿಮಾನದ ಬೀಜ ಬಿತ್ತಿ ಎಂದರಲ್ಲದೆ ಸಾಮಾಜಸೇವೆಯ ಮೂಲಕ ದೇಶ ಕಾಯುವ ಕೆಲಸ ಪಂಚವರ್ಣ ಸಂಸ್ಥೆ ಇಂದಲೂ ಆಗುತ್ತಿದೆ ಅದು ಮತ್ತೊಂದು ರೀತಿಯ ಸೇವೆಯಾಗಿದೆ ಎಂದು ಅಭಿಪ್ರಾಯಪಟ್ಟರು.

Click Here

ಇದೇ ವೇಳೆ ಸಂಸ್ಥೆಯ ವತಿಯಿಂದ ನಿವೃತ್ತ ಯೋಧ ಯೋಗೀಶ್ ಕಾಂಚನ್ ಇವರನ್ನು ಸನ್ಮಾನಿಸಿ ಗೌರವ ವಂದನೆ ಸಲ್ಲಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ, ಕಾರ್ಯದರ್ಶಿ ಶೇಖರ್ ಮರವಂತೆ, ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಇದ್ದರು. ಪಂಚವರ್ಣ ಮಹಿಳಾ ಮಂಡಲದ ಸದಸ್ಯರು ದೇಶ ಭಕ್ತಿಯ ಗೀತಾ ಗಾಯನ ನಡೆಸಿಕೊಟ್ಟರು.
ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಸದಸ್ಯರಾದ ದಿನೇಶ್ ಆಚಾರ್ ಸಿಹಿ ತಿಂಡಿಯ ವ್ಯವಸ್ಥೆ ಕಲ್ಪಿಸಿದರು. ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿದರು.ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಹಂದಟ್ಟು ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರೆ, ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

Click Here

LEAVE A REPLY

Please enter your comment!
Please enter your name here