ಕುಂದಾಪುರ: ಸಾಲಿಗ್ರಾಮ ಕಯಾಕಿಂಗ್ ತಂಡದಿಂದ ವಿಭಿನ್ನ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0
182

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷ ದಂತೆ ಈ ಬಾರಿಯೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರ ಪ್ರತೀ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಪಣ ತೊಟ್ಟು ದುಡಿದರೆ ಸಾಲಿಗ್ರಾಮ ಕಯಾಕಿಂಗ್ ತಂಡ ವಿಭಿನ್ನವಾಗಿ ರಾಷ್ಟ್ರ ಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ಈ ಬಾರಿಯೂ ವಿಭಿನ್ನ ಪ್ರಯತ್ನ ನಡೆಸಿದೆ.

ಕಳೆದ ಬಾರಿ ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ ತಂಡ ಈ ಬಾರಿ ನದಿಯ ಮದ್ಯದಲ್ಲಿ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನಡಿಗೆ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮವನ್ನು ಉತ್ತೇಜಿಸುವ ಪ್ರಯತ್ನ ಮಾಡಿದೆ.. ಉದ್ಯಮಿಗಳಾದ ಪ್ರಮೋದ್ ಮದ್ವರಾಜ್ ಇವರು ಧ್ವಜಾರೋಹಣಗೈದು ಮಾತನಾಡಿ ಯುವಕರ ಕಾರ್ಯ ಪ್ರಶಂಸನೀಯ,ಯುವಕರಲ್ಲಿನ ರಾಷ್ಟ್ರ ಪ್ರೇಮ ಯುವ ಜನಾಂಗಕ್ಕೆ ಮಾದರಿ. ಪ್ರತೀ ಬಾರಿಯೂ ನವೀನ ಆಲೋಚನೆಗಳ ಮೂಲಕ ಕಾರ್ಯ ನಿರ್ವಹಿಸಿ ಸಮಾಜಕ್ಕೆ ಮಾದರಿಯಾಗಿದ್ದರೆ ಎಂದರು. ಪ್ರಕೃತಿ ಮಡಿಲಲ್ಲಿ ಭಾರತಾಂಬೆಯನ್ನು ನಿಲ್ಲಿಸಿ ಜನರಿಗೆ ಪ್ರಕ್ರತಿ ಪ್ರೇಮದ ಜೊತೆ ದೇಶ ಪ್ರೇಮವನ್ನು ಬೆಳೆಸಿಕೊಳ್ಳಲು ಸಂದೇಶ ನೀಡಿದರು. ಸಾಲಿಗ್ರಾಮ ಕಯಾಕಿಂಗ್ ನ ಮುಖ್ಯಸ್ಥರಾದ ಮಿಥುನ್ ಕುಮಾರ್ ಮೆಂಡನ್, ಲೋಕೇಶ್ ಮತ್ತಿತರು ಉಪಸ್ಥಿತರಿದ್ದರು .

Click Here

LEAVE A REPLY

Please enter your comment!
Please enter your name here