ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ 2024 – 25 ಇವರು ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಅಂಪಾರು ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿ ಪ್ರೀತೇಶ್ ಇವರು ವೈಯಕ್ತಿಕ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಅಧ್ಯಾಪಕ ವೃಂದದವರು ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.











