ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ

0
780

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕೋಟ:
ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಕಛೇರಿ ಇಂದಿರಾ ಭವನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ಗುಂಡ್ಮಿ ರವೀಂದ್ರ ಕಾಮತ್ ರವರ ವಾರ್ಡ್ನ ಸದಸ್ಯರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Click Here

ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರಾದ ಬಸವ ಪೂಜಾರಿ ಸಾಸ್ತಾನ, ಪಾಂಡೇಶ್ವರ ಗ್ರಾಪಂ ಸದಸ್ಯರಾದ ರಾಘವೇಂದ್ರ ಆಚಾರ್ಯ ಎಡಬೆಟ್ಟು, ಗಣೇಶ್ ಕೆ ನೆಲ್ಲಿಬೆಟ್ಟು, ಬ್ಲಾಕ್ ನ ಹಿಂದುಳಿದ ವರ್ಗದ ಘಟಕದ ಉಪಾಧ್ಯಕ್ಷರಾದ ಮಂಜುನಾಥ ಪೂಜಾರಿ ಗೋಳಿಬೆಟ್ಟು, ಕಾಂಗ್ರೆಸ್ ಕಾರ್ಯಕರ್ತರಾದ ರಾಮ ಮಡಿವಾಳ,ಸುರೇಶ್ ಮಡಿವಾಳ ಉಪಸ್ಥಿತರಿದ್ದರು.

ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ಶ್ರೀನಿವಾಸ್ ಅಮೀನ್ ಸ್ವಾಗತಿಸಿ ವಂದಿಸಿದರು.

Click Here

LEAVE A REPLY

Please enter your comment!
Please enter your name here